ನವದೆಹಲಿ: ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದಿತು.
ಪ್ರಕರಣದ ವಿವರ:
ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಏಪ್ರಿಲ್ ನಲ್ಲಿ ಬಹಿರಂಗವಾಗಿತ್ತು. ಆ ವಿಡಿಯೋದಲ್ಲಿ ತನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಪುತ್ರ ದೂರು ನೀಡಿದ್ದರು. ಹೆಚ್‌ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬAಧಿ ಬಾಬು ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ಬಂಧಿಸಿದ್ದರು.
ನAತರ ಜಾಮೀನು ಕೋರಿ ಭವಾನಿ ರೇವಣ್ಣ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ಅವರಿಗೆ ನಿರೀಕ್ಷಣಾ ಜಾಮೀನು ದೊರೆತಿತ್ತು. ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ನಂತರ ಕರ್ನಾಟಕ ಹೈಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಎಸ್‌ಐಟಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅದರಂತೆ, ಸುಪ್ರೀಂ ಕೋರ್ಟ್ ಭವಾನಿ ರೇವಣ್ಣಗೆ ನೋಟಿಸ್ ಜಾರಿ ಮಾಡಿತ್ತು. ಇದೀಗ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ.