ಬೆಂಗಳೂರು: ಗ್ರಾಮ ಪಂಚಾಯಿತಿಗಳ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ.
ನ. 23 ರಂದು ರಾಜ್ಯದ 641 ಗ್ರಾಮ ಪಂಚಾಯಿತಿಗಳಿಗೆ ಉಪಚುನಾವಣೆ ನಡೆಯಲಿದ್ದು ನ.25ರಂದು ಫಲಿತಾಂಶ ಪ್ರಕಟವಾಗಲಿದೆ.
ನ.06ರಂದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು,ನ. 12ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ನ. 13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು,ನ.ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನ. 23 ರಂದು ಮತದಾನ ನಡೆಯಲಿದೆ.ಒಂದುವೇಳೆ ಮರು ಮತದಾನದ ಅಗತ್ಯವಿದ್ದರೆ ನ. 25ರಂದು ನಡೆಸಲು ನಿಗದಿ ಪಡಿಸಲಾಗಿದೆ.ನ 26 ರಂದು ಫಲಿತಾಂಶ ಪ್ರಕಟವಾಗಲಿದೆ.





























