Share this news

ಗದಗ :ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಸ್ಪೋಟಕ ಹೇಳಿಕೆ ನೀಡಿದ್ದು ಇದು ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಡಸಿದ್ದೇಶ್ವರ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ. ಮುಕ್ತಿಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿದ ಬಳಿಕ ಇದೇ ಜಾಗಕ್ಕೆ ಕರೆತಂದು ಅವರಿಂದಲೇ ಪೂಜೆ ಮಾಡಿಸುತ್ತೇವೆ ಎಂದು ಹೇಳಿದ್ದಾರೆ.
ಡಿಸಿಎಂ ಡಿಕೆಶಿ ಮುಂದಿನ ಸಿಎಂ ಎಂದು ಅವರ ಅಭಿಮಾನಿಗಳು ಪದೇಪದೇ ಘೋಷಣೆಗಳು ಕೂಗಿರುವ ನಡುವೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ನೀಡಿರುವ ಹೇಳಿಕೆ ಭಾರೀ ಮಹತ್ವ ಪಡೆದಿದೆ

 

Leave a Reply

Your email address will not be published. Required fields are marked *