ಹುಬ್ಬಳ್ಳಿ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ಈಗಾಗಲೇ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ
ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ಭೇಟಿ ನೀಡಿದ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಅಷ್ಟೇ. ನಾನಿನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾನು ಎನ್?ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೆಂದು ಬಯಕೆಯಿದೆ. ನನಗೊಂದು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದೇನೆ. ನನ್ನ ಜೊತೆ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿದ್ದಾರೆ. ಬಿಜೆಪಿಯಲ್ಲಿ 19 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ನನ್ನ ಸೇವೆ ಪರಿಗಣಿಸಿ ಅವಕಾಶ ನೀಡಿ ಎಂದು ಮನವಿ ಮಾಡಿದ್ದೇನೆ. ಜೆಡಿಎಸ್?ನಿಂದ ಸ್ಪರ್ಧೆಗೆ ಕಾರ್ಯಕರ್ತರ ಅಪಸ್ಪರ, ಗೊಂದಲವಿತ್ತು. ಹಾಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸಿದ್ದೇನೆ ಎಂದು ತಿಳಿಸಿದರು.
ಸಿ.ಪಿ ಯೋಗೇಶ್ವರ ನಡೆಯಿಂದ ಬಿಜೆಪಿ ಹಾಗೂ ಜೆಡಿಎಸ್ ಗೆ ತೀವೃ ಮುಖಭಂಗವಾಗಿದ್ದು ಇದು ದೋಸ್ತಿಗಳಿಗೆ ತೀವ್ರ ಹಿನ್ನಡೆಯಾಗಿದೆ