ಮಣಿಪಾಲ: ಆಂದ್ರಪ್ರದೇಶದ ಗುಂಟೂರಿನಲ್ಲಿ 16.10.2024ರಿಂದ 19.10.2024ರವರೆಗೆ ನಡೆದ 35ನೇ ಸೌತ್ ಝೋನ್(ದಕ್ಷಿಣ ಭಾರತ ಮಟ್ಟ) ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2024ರಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 18ರ ಒಳಗಿನ ವಯೋಮಾನದ ಬಾಲಕರ ವಿಭಾಗದಲ್ಲಿ 200 ಮೀ. ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಹಾಗೂ ಮೆಡ್ಲೆ ರಿಲೇಯಲ್ಲಿ ಚಿನ್ನದ ಪದಕವನ್ನು ಗಳಿಸಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.
ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿಗಳ ಸುಪುತ್ರ.
ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.