ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ಮಟ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾದ ಮನೋಜ್ ಜೈನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದ ಮುಖ್ಯ ಮೌಲ್ಯಮಾಪನ ಅಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ. ರಮಣದೀಪ್ ಚೌಧರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಬೆಂಗಳೂರಿನ ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದ ಮುಖ್ಯ ಮೌಲ್ಯಮಾಪನ ಅಧಿಕಾರಿ ಸುಷ್ಮಾ ಗೋಡಬೋಲೆ ಅವರನ್ನು ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಬಸವರಾಜು ಎ.ಬಿ ಅವರನ್ನು ವರ್ಗಾವಣೆಗೊಳಿಸಿದೆ.ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಬೆಂಗಳೂರು ನಿರ್ದೇಶಕರಾದ ನಿತೇಶ್ ಪಾಟೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರ ಹುದ್ದೆಗೆ ನೇಮಕ ಮಾಡಲಾಗಿದೆ.ಬಸವರಾಜೇಂದ್ರ ಎಚ್., ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರಾಗಿ ನೇಮಿಸಲಾಗಿದೆ. ಲೋಖಂಡೆ ಸ್ನೇಹಲ್ ಸುಧಾಕರ್, ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್, ಬೆಂಗಳೂರು ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ಜಂಟೀ ನಿಯಂತ್ರಕರ ಹುದ್ದೆಗೆ ನೇಮಿಸಲಾಗಿದೆ. ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿ ಬಸವರಾಜು ಎ.ಬಿ., ಅವರನ್ನು ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ, ಬೆಂಗಳೂರು ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ರಂಗಪ್ಪ ಎಸ್., ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಹಣಕಾಸು ನೀತಿ ಸಂಸ್ಥೆಯ ಹೆಚ್ಚುವರಿ ನಿರ್ದೇಶಕರಾಗಿ ನೇಮಿಸಲಾಗಿದೆ.