Share this news

ಹೆಬ್ರಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುನಿಯಾಲಿನಲ್ಲಿ ಸೋಮವಾರ ನಡೆದಿದೆ. ಮುನಿಯಾಲು ಮುದೆಲ್ಕಡಿ ನಿವಾಸಿ ಅಮರನಾಥ (60ವ) ಆತ್ಮಹತ್ಯೆ ಮಾಡಿಕೊಂಡವರು.

ಅಮರನಾಥ ಅವರಿಗೆ ಯಾವುದೋ ಕಾಯಿಲೆಯಿಂದ ಕಣ್ಣು ಕಾಣಿಸಿದೆ ಇದ್ದು, ಕೆಲಸಕ್ಕೆ ಹೋಗಲು ಆಗದೇ ಮನೆಯಲ್ಲಿಯೇ ಇರುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಆರೋಗ್ಯವೂ ಹದಗೆಟ್ಟಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕವಾಗಿ ನೊಂದು ಅ.24 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಇಲಿ ಪಾಷಣ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದರು.

ವಿಷ ಸೇವಿಸಿ ತೀವೃ ಅಸ್ವಸ್ಥಗೊಂಡಿದ್ದ ಅವರನ್ನು ಕಾರ್ಕಳ ಟಿ.ಎಂ. ಪೈ ಅಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕ್ಸಿತೆಗಾಗಿ ಅಜ್ಜರಕಾಡು ಸರಕಾರಿ ಅಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅರಮನಾಥ ಅ.28 ರಂದು ಮೃತಪಟ್ಟಿದ್ದಾರೆ.

ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Leave a Reply

Your email address will not be published. Required fields are marked *