ಕಾರ್ಕಳ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಸ್ಪೂರ್ತಿ, ಮನೋಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿವಿದ ರೀತಿಯ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಕುರಿತು ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಮಾತನಾಡಿ, ಕ್ರಿಯೇಟಿವ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಕೇವಲ ಕಲಿಕೆ ಮಾತ್ರವಲ್ಲದೆ ಕ್ರೀಡಾ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಪ್ರತಿ ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಇದರಲ್ಲಿ ಭಾಗವಹಿಸಬೇಕು. ಕ್ರೀಡೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವುದು ಮುಖ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪನ್ಯಾಸಕ ವರ್ಗದವರು, ನಿಲಯ ಪಾಲಕರು, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳನ್ನು ವಿವಿಧತಂಡಗಳನ್ನಾಗಿ ವಿಂಗಡಿಸಿ ಕ್ರಿಕೆಟ್, ವಾಲಿಬಾಲ್, ತ್ರೋಬಾಲ್, ಮುಂತಾದ ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಯಿತು.