Share this news

ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ (ಪುರುಷರ ಹಾಗೂ ಮಹಿಳೆಯರ) ಮತ್ತು ಬೆಸ್ಟ್ ಫಿಸಿಕ್ (ಪುರುಷರ ವಿಭಾಗ) ಸ್ಪರ್ಧೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ನ.8 ರಂದು ನಿಟ್ಟೆಯ ಬಿಸಿ ಆಳ್ವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿತ್ತು.

ನಿಟ್ಟೆ ತಾಂತ್ರಿಕ ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ಬೆಂಗಳೂರಿನ ಕನೆಕ್ಟ್ಎಮ್ ಟೆಕ್ನಾಲಜಿ ಸೊಲ್ಯೂಷನ್ಸ್ ಪ್ರೈ. ಲಿ. ನಲ್ಲಿ ಹಿರಿಯ ಎಂಬೆಡ್ಡೆಡ್ ಫಮ್ವೇðರ್ ಎಂಜಿನಿಯರ್ ಆಗಿರುವ ವೈಭವ್ ವಿ. ಪ್ರಭು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಡಿಪ್ಲಮೋ ಹಾಗೂ ಇಂಜಿನಿಯರಿAಗ್ ವಿದ್ಯಾರ್ಥಿಯಾಗಿರುವ ಸಂದರ್ಭದಲ್ಲಿ ತಮ್ಮನ್ನು ತಾವು ಕ್ರೀಡಾಪಟುವಾಗಿ ರೂಪಿಸಿಕೊಳ್ಳುವಲ್ಲಿ ಪಟ್ಟ ಶ್ರಮವನ್ನು ನೆನಪಿಸಿಕೊಂಡು ನಿರಂತರ ಅಭ್ಯಾಸದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಕಾಮನ್ವೆಲ್ತ್ ಚಿನ್ನದ ಪದಕ ವಿಜೇತ ವೈಟ್ ಲಿಫ್ಟರ್ ಮತ್ತು ಕೆನರಾ ಬ್ಯಾಂಕಿನ ನಿವೃತ್ತ ಹಿರಿಯ ಮ್ಯಾನೇಜರ್ ಪುಷ್ಪರಾಜ ಹೆಗ್ಡೆ ಅವರು ನಿಟ್ಟೆ ಸಮೂಹ ಸಂಸ್ಥೆ ಕ್ರೀಡೆಗೆ ಕೊಡುತ್ತಿರುವ ಬೆಂಬಲ ಹಾಗೂ ಪ್ರೋತ್ಸಾಹವನ್ನು ಶ್ಲಾಘಿಸಿದರು ಹಾಗೂ ಕ್ರೀಡಾ ಕ್ಷೇತ್ರವನ್ನು ಪ್ರೋತ್ಸಾಹಿಸಲು ಕಲ್ಪಿಸಲಾದ ವಿವಿಧ ಸವಲತ್ತುಗಳನ್ನು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಲುಂಕರ ಮಾತನಾಡಿ ಸಮಗ್ರ ಶಿಕ್ಷಣದಲ್ಲಿ ಕ್ರೀಡೆಯ ಮಹತ್ವವನ್ನು ತಿಳಿಸಿದರು ಮತ್ತು ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವವನ್ನು ಬೆಳೆಸುವಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಪ್ರಯತ್ನವನ್ನು ತಿಳಿಸಿದರು.

ವೇದಿಕೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹಾಗೂ ನಿಟ್ಟೆ ಪಾಲಿಟೆಕ್ನಿಕ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗಂಗಾಧರ್ ಪೂಜಾರಿ ಉಪಸ್ಥಿತರಿದ್ದರು.

ನಿಟ್ಟೆ ತಾಂತ್ರಿಕ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಗಣೇಶ್ ಪೂಜಾರಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅನ್ವಿತಾ ಅತಿಥಿಗಳನ್ನ ಪರಿಚಯಿಸಿದರು. ನಿಟ್ಟೆ ಕ್ಯಾಂಪಸ್ ನ ಕ್ರೀಡಾ ಆಡಳಿತಾಧಿಕಾರಿ ಶ್ಯಾಮಸುಂದರ್ ಎಂ ಅವರು ಕಾರ್ಯಕ್ರಮ ನಿರೂಪಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *