Share this news

ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದ್ದು, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾ ಮಾಡಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಪರ ವಕೀಲರು ಸುಪ್ರೀಂಕೋಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಅವರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದಿ ಮಂಡಿಸಿ ಜಾಮೀನು ನೀಡುವಂತೆ ಮನವಿ ಮಾಡಿದರು.

ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು, ಈ ವೇಳೆ ನನಗೆ ಡ್ಯಾಮೇಜ್ ಮಾಡಲು ಆರೋಪ ಮಾಡಲಾಗಿದೆ. ಹೀಗಾಗಿ, ನನ್ನ ಕಕ್ಷಿದಾರರಿಗೆ ಜಾಮೀನು ನೀಡುವಂತೆ ಮನವಿ ಮಾಡಿದರು. ಆದರೆ, ನ್ಯಾಯಪೀಠ ಮುಕುಲ್ ರೋಹ್ಟಗಿ ವಾದ ಒಪ್ಪದೆ. ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದಾನೆ ಎಂದು ಅರ್ಜಿ ವಜಾಗೊಳಿಸಿತು.
ಆಗ, ಮುಕುಲ್ ರೋಹ್ಟಗಿ ಅವರು 6 ತಿಂಗಳ ನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದೆ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ನಾವೇನು ಹೇಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *