Share this news

ಬೆಂಗಳೂರು: ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಇಂದು ನಡೆಯುತ್ತಿದೆ. ಇಂದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಮೂರು ಕ್ಷೇತ್ರಗಳ ಪೈಕಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿದೆ. ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ನಿAದ ಸಿಪಿ ಯೋಗೇಶ್ವರ್ ಹಾಗೂ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಚನ್ನಪಟ್ಟಣದಲ್ಲಿ ಒಟ್ಟು 276 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗಿದೆ. ನಗರ ಪ್ರದೇಶದಲ್ಲಿ 62, ಗ್ರಾಮೀಣ ಪ್ರದೇಶದಲ್ಲಿ 214 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ. 119 ಮತಗಟ್ಟೆಗಳನ್ನ ಸೂಕ್ಷ್ಮ ಮತಗಟ್ಟೆಗಳು ಎಂದು ನಿರ್ಧರಿಸಲಾಗಿದೆ. 8 ವಿಶೇಷ ಮತಗಟ್ಟೆ, 5 ಸಖಿ ಮತಗಟ್ಟೆ, ವಿಶೇಷ ಚೇತನರಿಗಾಗಿ 1 ಮತಗಟ್ಟೆ, 1 ಯುವ ಮತಗಟ್ಟೆ, 1 ಸಾಂಪ್ರದಾಯಿಕ ಮತಗಟ್ಟೆ ತೆರೆಯಲಾಗಿದೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣದಲ್ಲಿದರೆ, ಕಾಂಗ್ರೆಸ್‌ನಿಂದ ಯಾಸೀರ್ ಖಾನ್ ಪಠಾಣ್ ಸೇರಿ ಅಂತಿಮ ಕಣದಲ್ಲಿರುವ 8 ಅಭ್ಯರ್ಥಿಗಳಿದ್ದಾರೆ. ಇಲ್ಲೂ ಎರಡು ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ.
ಶಿಗ್ಗಾಂವಿಯಲ್ಲಿ ಒಟ್ಟು 2,37,525 ಮತದಾರರಿದ್ದಾರೆ. ಈ ಪೈಕಿ ಪುರುಷರು 1,21,443 ಹಾಗೂ ಮಹಿಳೆಯರು 1,16,76 ಮತಗಳಿವೆ. ಒಟ್ಟು 241 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಪೈಕಿ 92 ಮತಗಟ್ಟೆಗಳು ಸೂಕ್ಷ್ಮವೆಂದು ಗುರ್ತಿಸಲಾಗಿದೆ

ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಹಾಗೂ ಬಿಜೆಪಿಯ ಬಂಗಾರು ಹನುಮಂತು ನಡುವೆ ನೇರಾ ಹಣಾಹಣಿ ನಡೆದಿದೆ. ಒಟ್ಟಾರೆ 7 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.
ಸಂಡೂರಿನಲ್ಲಿ ಒಟ್ಟು 2,36,100 ಮತದಾರರಿದ್ದು, ಈ ಪೈಕಿ 1,18,282 ಮಹಿಳಾ ಮತದಾರರು, 1,17,789 ಪುರುಷ ಮತದಾರರಿದ್ದಾರೆ. ಒಟ್ಟು 253 ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, 55 ಸೂಕ್ಷ್ಮ ಮತಗಟ್ಟೆಗಳಿವೆ

ಒಟ್ಟಾರೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ  ಮತೋತ್ಸವ ನಡೆಯಲಿದೆ. ನವೆಂಬರ್ 23 ಕ್ಕೆ ಫಲಿತಾಂಶ ಹೊರ ಬೀಳಲಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *