ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಸಿಬಿಐ ತನಿಖೆಯ ಅಗತ್ಯವಿಲ್ಲವೆಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆಗೆ ಕೈಗೆತ್ತಿಕೊಂಡು ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗ್ಯವಿಲ್ಲವೆಂದು ಹೇಳಿದ ನ್ಯಾಯಪೀಠ ಯೂನಿಯನ್ ಬ್ಯಾಂಕ್ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿತು. ಈ ಮೂಲಕ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ