ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭ ಕೋವಿಡ್-19 ಸೋಂಕಿನ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ರಾಜ್ಯ ಸರಕಾರ ನಿರ್ಧರಿಸಿದೆ.
ಕೋವಿಡ್ ಹಗರಣದ ತನಿಖೆಗಾಗಿ ನೇಮಿಸಲಾಗಿದ್ದ ಮೈಕಲ್ ಡಿ.ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ಈಗಾಗಲೇ ರಾಜ್ಯ ಸರಕಾರಕ್ಕೆ ಸಲ್ಲಿಸಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್ ಕೆ ಪಾಟೀಲ್, ʼಕೋರೋನಾ ವೇಳೆ ಪಿಪಿಇ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ ಎಂದು ಹಲವು ದೂರು ದಾಖಲಾಗಿದ್ದವು. ಈ ಸಂಬಂಧ ಕೋವಿಡ್ ಅಕ್ರಮದ ತನಿಖೆಗೆ ಎಸ್ಐಟಿ ರಚನೆಗೆ ಸಂಪುಟ ಸಮ್ಮತಿಸಿದೆʼ ಎಂದು ಮಾಹಿತಿ ನೀಡಿದರು.
































































































