Share this news

ಉತ್ತರ ಪ್ರದೇಶ: ಇಲ್ಲಿನ ಝಾನ್ಸಿಯ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಯ ಕೆನ್ನಾಲೆಗೆಗೆ 10 ನವಜಾತ ಶಿಶುಗಳು ಸಜೀವ ದಹನವಾಗಿದ್ದರೆ, 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಉತ್ತರ ಪ್ರದೇಶದ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ರಾತ್ರಿ 10:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಆಕ್ಸಿಜನ್ ಕಾನ್ಸೆಂಟ್ರೇಟರ್ ಒಳಗೆ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಸಂಭವಿಸಿದೆ ಎಂದು ಹೇಳಲಾಗಿದೆ. ಬೆಂಕಿ ತಗುಲಿದ ತಕ್ಷಣ ಆಸ್ಪತ್ರೆ ಸಿಬ್ಬಂದಿಗಳು ಮಕ್ಕಳನ್ನು ಕಾಪಾಡಲು ಮುಂದಾಗಿದ್ದಾರೆ.

ಓIಅUನ ಲ್ಲಿ ಒಟ್ಟು 54 ಮಕ್ಕಳು ದಾಖಲಾಗಿದ್ದರು. ಆ ಪೈಕಿ 10 ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಇದರಲ್ಲಿ 7 ಮಕ್ಕಳ ಗುರುತು ಪತ್ತೆ ಮಾಡಲಾಗಿದೆ. ಉಳಿದ ಮೂರು ಮಕ್ಕಳ ಗುರುತು ಪತ್ತೆಯಾಗಿಲ್ಲ. ಈ ಕಾರಣಕ್ಕೆ ಮಕ್ಕಳ ಡಿಎನ್‌ಎ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.

ಇನ್ನು ಬೆಂಕಿ ಅನಾಹುತದಿಂದ ಗಾಯಗೊಂಡಿರುವ ಮಕ್ಕಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಝಾನ್ಸಿ ಸುಧಾ ಸಿಂಗ್ ಈ ಬಗ್ಗೆ ವರದಿಯನ್ನು ಪಡೆದಿದ್ದಾರೆ.

ಮಕ್ಕಳ ಕುಟುಂಬದವರು ಈ ಘಟನೆ ನಡೆದಾಗ ಅಗ್ನಿಶಾಮಕ ದಳ ಕೂಡ ಬಂದಿಲ್ಲ. ಇಂತಹ ಘಟನೆಗಳು ನಡೆದಾಗ ಮುಂಜಾಗ್ರತಾ ಕ್ರಮವಾಗಿ ಒಂದು ವ್ಯವಸ್ಥೆ ಕೂಡ ಆಸ್ಪತ್ರೆಯಲ್ಲಿ ಇಲ್ಲ ಎಂದು ಆರೋಪಿಸಿದ್ದಾರೆ. ಈ ಘಟನೆಯ ಬಗ್ಗೆ ತನಿಖೆ ನಡೆಸಲು ಸರ್ಕಾರ ಆದೇಶಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ 5 ಲಕ್ಷ ಆರ್ಥಿಕ ನೆರವು, ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ಪರಿಹಾರ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *