ಪಡುಬಿದ್ರಿ: ಗೂಡ್ಸ್ ವಾಹನವೊಂದು ಟಯರ್ ಬ್ಲಾಸ್ಟ್ ಆದ ಪರಿಣಾಮ ಪಲ್ಟಿಯಾಗಿದ ಘಟನೆ ಪಡುಬಿದ್ರಿ ಯಲ್ಲಿ ನಡೆದಿದೆ. ಅಪಘಾತದಿಂದ ಅದರಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾವೂರಿನಿಂದ ಕಟಪಾಡಿಗೆ ಸೆಂಟ್ರಿಗ್ ಪರಿಕರಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನದ ಹಳೆ ಟಯರ್ ಬ್ಲಾಸ್ಟ್ ಆಗಿ ಎರ್ಮಾಳು ಬುದ್ದಗಿ ಪೆಟ್ರೋಲ್ ಬಂಕ್ ಬಳಿ ಹೆದ್ದಾರಿಗೆ ಉರುಳಿ ಬಿದ್ದಿದೆ.
ಆ ಸಂದರ್ಭ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ನಡೆಯಲಿದ್ದ ಬಾರೀ ದುರಂತ ತಪ್ಪಿದಂತಾಗಿದೆ. ಘಟನೆಯಿಂದ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ಸಂಚಾರಿ ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
































































































