Share this news

ಹೆಬ್ರಿ: ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು ದಾಳಿಯ ವೇಳೆ ಸ್ಥಳದಲ್ಲಿದ್ದ 6 ಮಂದಿ ಆರೋಪಿಗಳು ಪರಾರಿಯಾಗಿರುವ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇಳಂಜೆ ಗ್ರಾಮದ ದೂಪದಕಟ್ಟೆ ಎಂಬಲ್ಲಿ ಸೋಮವಾರ ನಡೆದಿದೆ.

ಹೆಬ್ರಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಮಹೇಶ್ ಟಿ.ಎಂ ಸಿಬ್ಬಂದಿಗಳೊAದಿಗೆ ರೌಂಡ್ಸ್ ನಲ್ಲಿದ್ದ ಬೇಳಂಜೆ ಗ್ರಾಮದ ದೂಪದಕಟ್ಟೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ಜುಗಾರಿ ನಡೆಸುತ್ತಿದ್ದಾರೆ ಎಂಬುದಾಗಿ ಬಂದ ಮಾಹಿತಿಯಂತೆ ದಾಳಿ ನಡೆಸಿದ್ದು ಆರೋಪಿಗಳಾದ ಕೀಶನ್, ಸುನೀಲ, ರಾಘವೇಂದ್ರ, ರಾಜೇಶ, ಕಿರ್ತನ್ ,ಮತ್ತು ರಂಜಿತ್ ಪರಾರಿಯಾಗಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *