ಕಾರ್ಕಳ: ಕಳೆದ 5 ವರ್ಷಗಳ ಅವಧಿಯಲ್ಲಿ ಕರ್ನಾಟಕದಲ್ಲಿ ನೇರ ಮಾರುಕಟ್ಟೆಯಲ್ಲಿ ಮಾಡಿರುವ ಅದ್ವಿತೀಯ ಸಾಧನೆಗಾಗಿ ಕಾರ್ಕಳದ EMWI ಮಾರ್ಕೆಟಿಂಗ್(OPC) ಪ್ರೈ.ಲಿಮಿಟೆಡ್ ಕಂಪೆನಿಗೆ ಕರ್ನಾಟಕದ ಅತ್ಯುತ್ತಮ ನೇರ ಮಾರುಕಟ್ಟೆ ಕಂಪೆನಿ ಪ್ರಶಸ್ತಿ ಲಭಿಸಿದೆ.
ಬ್ಲಿಂಡ್’ವಿಂಕ್ ಸಂಸ್ಥೆಯ 2024ನೇ ಸಾಲಿನ ಪ್ರಶಸ್ತಿಗಾಗಿ ದೇಶದ ನೂರಾರು ಕಂಪೆನಿಗಳು ಸ್ಪರ್ಧೆ ನಡೆಸಿದ್ದವು.ಈ ಪೈಕಿ ನೇರ ಮಾರುಕಟ್ಟೆಯ ವಿಭಾಗದಲ್ಲಿ EMWI ಮಾರ್ಕೆಟಿಂಗ್ ಕಂಪೆನಿಯು ಕರ್ನಾಟಕದ ನಂಬರ್ ವನ್ ಕಂಪೆನಿಯಾಗಿ ಹೊರಹೊಮ್ಮಿದ್ದು, ಬ್ಲಿಂಡ್’ವಿಂಕ್ ಸಂಸ್ಥೆಯಿಂದ ನೀಡಲಾಗುವ ಬೆಸ್ಟ್ ಡೈರೆಕ್ಟ್ ಸೆಲ್ಲಿಂಗ್ ಕಂಪೆನಿ ಇನ್ ಕರ್ನಾಟಕ,ಮೋಸ್ಟ್ ಟ್ರಸ್ಟೆಡ್ ನ್ಯಾಚುರಲ್ ಹೆಲ್ತ್ & ವೆಲ್’ನೆಸ್ ಬ್ರಾಂಡ್ ಇನ್ ಕರ್ನಾಟಕ ಹಾಗೂ ಮೋಸ್ಟ್ ಪಾಪ್ಯುಲರ್ ಫ್ಯಾಷನ್ & ಲೈಫ್ ಸ್ಟೈಲ್ ಬ್ರಾಂಡ್ ಇನ್ ಕರ್ನಾಟಕ ಪ್ರಶಸ್ತಿಯನ್ನು EMWI ಕಂಪೆನಿ ಪಡೆಯುವ ಮೂಲಕ ಮೂರೂ ವಿಭಾಗಗಳಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದೆ.
ಬೆಂಗಳೂರಿನ ಹೋಟೆಲ್ ತಾಜ್ ನಲ್ಲಿ ನಡೆದ ಸಮಾರಂಭದಲ್ಲಿ ದೇಶದ ನೂರಾರು ಕಂಪೆನಿಗಳು ಪ್ರಶಸ್ತಿಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.ನೇರ ಮಾರುಕಟ್ಟೆ ವಿಭಾಗದಲ್ಲಿ ಎಲ್ಲಾ ಕಂಪೆನಿಗಳನ್ನು ಹಿಂದಿಕ್ಕಿ EMWI ಕಂಪೆನಿಯ ಸಂಸ್ಥಾಪಕ ಹಾಗೂ ನಿರ್ದೇಶಕ ಸಯ್ಯದ್ ಮುಜೀಬ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಕಂಪೆನಿಯ ಎಲ್ಲಾ ಸದಸ್ಯರ ಕಠಿಣ ಪರಿಶ್ರಮದ ಫಲವಾಗಿ ಇಂದು ಈ ಪ್ರಶಸ್ತಿ ಪಡೆಯಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.
ಸ್ವಉದ್ಯೋಗವನ್ನು ನಡೆಸಿಕೊಂಡು ಸ್ವಾವಲಂಬಿ ಜೀವನ ನಡೆಸುವವರಿಗೆ EMWI ಮಾರ್ಕೆಟಿಂಗ್ ಕಂಪೆನಿ ಅವಕಾಶ ಕಲ್ಪಿಸಿದ್ದು, ಈಗಾಗಲೇ ಈ ಕಂಪೆನಿಯ ಮೂಲಕ ಸ್ವ ಉದ್ಯೋಗ ನಡೆಸುತ್ತಿರುವ ಸಾಕಷ್ಟು ಮಂದಿ ಕಂಪೆನಿಯಿಂದ ಕಾರು,ಬೈಕ್ ಅಚೀವರ್ಸ್ ಆಗಿದ್ದು ಕಲವರು ತಮ್ಮ ಸ್ವಂತ ಮನೆಯ ಕನಸನ್ನು ನನಸಾಗಿಸಿದ್ದಾರೆ. ಕಾರ್ಕಳದಲ್ಲಿ ಪ್ರಧಾನ ಕಚೇರಿ ಹೊಂದಿರುವ EMWI ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ರಾಜ್ಯಾದ್ಯಂತ 5 ಸಾವಿರಕ್ಕೂ ಮಿಕ್ಕಿ ಸದಸ್ಯರಿದ್ದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.
ಭಾರತ ಸರ್ಕಾರದಿಂದ ಮಾನ್ಯತೆ ಪಡೆದಿರುವ EMWI ಮಾರ್ಕೆಟಿಂಗ್ ಕಂಪೆನಿಯು ಸ್ವದೇಶಿ ಉತ್ಪನ್ನಗಳ ಬಳಕೆಗೆ ಮಹತ್ವ ನೀಡಿದೆ. ಈಗಾಗಲೇ ಕರ್ನಾಟಕದಲ್ಲಿ ಮನೆಮಾತಾಗಿರುವ EMWI ಕಂಪೆನಿಯು ಮುಂದಿನ ದಿನಗಳಲ್ಲಿ ಭಾರತದಾದ್ಯಂತ ತನ್ನ ಮಾರುಕಟ್ಟೆ ಜಾಲ ವಿಸ್ತರಿಸಲಿದೆ ಎಂದು ಕಂಪೆನಿಯ ಸಂಸ್ಥಾಪಕ ಹಾಗೂ ನಿರ್ದೇಶಕ ಸಯ್ಯದ್ ಮುಜೀಬ್ ಹೇಳಿದ್ದಾರೆ



































































ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
































































































ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.
































































































