ಉಡುಪಿ: ತುಳುಕೂಟ ಉಡುಪಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಜೈ ತುಳುನಾಡ್ ಉಡುಪಿ, ರೋಟರಿ ಕ್ಲಬ್ ಕಲ್ಯಾಣಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ “ತುಳು ಮಿನದನ-2024” ಕಾರ್ಯಕ್ರಮವನ್ನು ಇದೇ ನ.30ರಂದು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತುಳುಕೂಟದ ಅಧ್ಯಕ್ಷೆ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವೈಯಕ್ತಿಕ ವಿಭಾಗದಲ್ಲಿ ‘ಎಲ್ಯ ತುಳು ಕತೆ ತುಳು ಲಿಪಿಟೇ ಬರೆಲೆ ಸೋಡಾಪಾಡ್’, ‘ತುಳು ಚುಂಗುಡಿ (ಚುಟುಕು) ಬರೆಲೆ ಸೋಡಾಪಾಡ್’ ಹಾಗೂ ‘ಸಟಕ್ಕ ಪಾತೆರ್ಲೆ’ ಸ್ಪರ್ಧೆ ನಡೆಯಲಿದೆ.
ಗುಂಪು ವಿಭಾಗದಲ್ಲಿ ಪೊಟ್ಟು ಭಾಸೆನ್ ಸಕ್ಕ ತೆರಿಲೆ, ಸೆಬಿ ಸವಾಲ್, ಮಾಜಿದ್ ಪೋಯಿನಿ ತುಳುವ ಗೊಬ್ಬುಲೆನ ತೂಪರಿಕೆ ಹಾಗೂ ಗುಂಪು ಪದ ಪನ್ಲೆ ಸ್ಪರ್ಧೆ ಜರುಗಲಿದೆ. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುವುದು. ಅತಿ ಹೆಚ್ಚು ಅಂಕ ಪಡೆಯುವ ಕಾಲೇಜಿನ ಸುಮನಾ ಮಾಧವ ಶೆಟ್ಟಿ ಕುಕ್ಕೆಹಳ್ಳಿ ತುಳು ಮಿನದನ ಚಾಂಪಿಯನ್ ಶಿಪ್ ವಿಶೇಷ ಫಲಕ ನೀಡಲಾಗುವುದು ಎಂದು ಕಾರ್ಯಕ್ರಮದ ಸಂಚಾಲಕ ವಿ.ಕೆ. ಯಾದವ್ ತಿಳಿಸಿದರು.
ವಿದ್ಯಾರ್ಥಿ ತುಳು ಕವಿಗೋಷ್ಠಿ ನಡೆಯಲಿದ್ದು, ಒಂದು ಕಾಲೇಜಿನಿಂದ ಓರ್ವ ವಿದ್ಯಾರ್ಥಿ ಭಾಗವಹಿಸಬಹುದು. ಸಂಜೆ 3.30ಕ್ಕೆ ಸಮಾರೋಪ ನಡೆಯಲಿದ್ದು, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ. ವಿನ್ಸೆಂಟ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕವಿಗೋಷ್ಠಿಯ ಅಧ್ಯಕ್ಷ ಗಂಗಾಧರ್ ಕಿದಿಯೂರು, ಕೆಮ್ತೂರು ತುಳುನಾಟಕದ ಸಂಚಾಲಕ ಪ್ರಭಾಕರ ಭಂಡಾರಿ, ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪಿಆರ್ ಒ ರವಿನಂದನ್ ಉಪಸ್ಥಿತರಿದ್ದರು.

ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.