ಉಡುಪಿ : ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ನಾಳೆ (ಡಿ.6) ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ವಕ್ಫ್ ಬೋರ್ಡ್ ಕಾನೂನಿನಡಿಯಲ್ಲಿ ರೈತರು ಹಾಗೂ ಸಾರ್ವಜನಿಕರಿಗೆ ಉದ್ಭವಿಸಬಹುದಾದ ಸಂಕಷ್ಟಗಳ ಕುರಿತು ಸಂಬAಧಿತ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.
ಬಳಿಕ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.