Share this news

ಕಾರ್ಕಳ: ವಿಪರೀತ ಮದ್ಯಪಾನ ಮಾಡುವ ಚಟವಿದ್ದ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.5 ರ ರಾತ್ರಿ ನಡೆದಿದೆ.

ತಾಲೂಕಿನ ಇರ್ವತ್ತೂರು ಗ್ರಾಮದ ಸುರೇಶ್ (55) ಆತ್ಮಹತ್ಯೆ ಮಾಡಿಕೊಂಡವರು. ಅವರು ವಿಪರೀತ ಮದ್ಯಪಾನ ಮಾಡುತ್ತಿದ್ದು, ಕೆಲಸಕ್ಕೂ ಹೋಗುತ್ತಿರಲಿಲ್ಲ. ಇದೇ ಕಾರಣದಿಂದ ಕೈಯಲ್ಲಿ ಖರ್ಚಿಗೂ ಹಣವಿಲ್ಲದೆ ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published. Required fields are marked *