Share this news

ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್.ಎಂ ಕೃಷ್ಣ ಅವರು ಮಂಗಳವಾರ ನಸುಕಿನ ಜಾವ ಬೆಂಗಳೂರಿನ ಸದಾಶಿವನಗರ ಮನೆಯಲ್ಲಿ ನಿಧನರಾಗಿದ್ದಾರೆ. ಎಸ್ ಎಂ ಕೃಷ್ಣ ಅವರ ಸಾವಿನ ಸುದ್ದಿ ಕೇಳಿ ರಾಜ್ಯ ಮತ್ತು ದೇಶದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಎಸ್ ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಇಂದು ಸಂಜೆ ನಡೆಯಲಿದೆ.

ಮಂಗಳವಾರ ಬೆಳಗ್ಗೆಯಿಂದ ಬುಧವಾರದ ಬೆಳಗ್ಗೆ 8 ಗಂಟೆಯವರೆಗೆ ಬೆಂಗಳೂರಿನ ಸದಾಶಿವನಗರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಸದಾಶಿವನಗರಕ್ಕೆ ಅನೇಕ ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು. ಎಸ್ ಎಂ ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭವಾಗಿದ್ದು, ಅವರ ತವರೂರು ಸೋಮದೇವನಹಳ್ಳಿಗೆ ತೆರಳಲಿದೆ.

ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮಧ್ಯಾಹ್ನ 3 ಗಂಟೆಯ ನಂತರ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್ ಶರ್ಮ ಅವರ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದAತೆ ಅಂತಿಮ ಸಂಸ್ಕಾರದ ವಿಧಿ, ವಿಧಾನಗಳನ್ನು ನೇರವೇರಲಿವೆ. ಬಳಿಕ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್??, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಅನೇಕ ಶಾಸಕರು ಹಲವು ಗಣ್ಯ, ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ.

ಅಂತ್ಯಕ್ರಿಯೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಡಿಐಜಿ ಬೋರಲಿಂಗಯ್ಯ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಡಿಐಜಿ, ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಖುದ್ದು ಸ್ಥಳದಲ್ಲೆ ಬೀಡು ಬಿಟ್ಟಿದ್ದಾರೆ. ಇಬ್ಬರು ಎಸ್ ಪಿ, ಮೂವರು ಹೆಚ್ಚುವರಿ ಎಸ್ ಪಿ, 10 ಮಂದಿ ಡಿಎಸ್ ಪಿ, 31 ಮಂದಿ ಪಿಐ, 70 ಮಂದಿ ಪಿಎಸ್‌ಐ, 700 ಪೊಲೀಸ್ ಸಿಬ್ಬಂದಿ, 200 ಹೋಮ್ ಗಾರ್ಡ್, 6 ಕೆಎಸ್‌ಆರ್?ಪಿ, 6 ಡಿಎಆರ್ ಸೇರಿದಂತೆ ಸಾವಿರುಕ್ಕೂ ಹೆಚ್ಚು ಜನರನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿದೆ.

 

Leave a Reply

Your email address will not be published. Required fields are marked *