ಮಂಗಳೂರು : ವಕ್ಫ್ ಭೂ ಕಬಳಿಕೆಗೆ ಸಂಬAಧಿಸಿದAತೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಣಿಪ್ಪಾಡಿ ಇದೀಗ ಸ್ಫೋಟಕ ಹೇಳಿಕೆ ನೀಡಿದ್ದು, ಈ ವಿಚಾರವಾಗಿ ಬಿಜೆಪಿ ಆಗಲಿ ಬಿವೈ ವಿಜಯೇಂದ್ರ ಯಾವುದೇ ಆಮೀಷ ಒಡ್ಡಿಲ್ಲ. ಸಿಎಂ ಸಿದ್ದರಾಮಯ್ಯ ಹೇಳಿರುವುದು 90 ಪ್ರತಿಶಕ ಸುಳ್ಳು. ಬದಲಾಗಿ ಕಾಂಗ್ರೆಸ್ ನಾಯಕರೇ ನನಗೆ ಆಮಿಷ ಒಡ್ಡಿದ್ದರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹಾಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಜಯೇಂದ್ರ ಮೇಲೆ ಸುಳ್ಳು ಆರೋಪ ಮಾಡಿದರೆ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿರುವುದು ಬಯಲಾಗಿದ್ದು, ಈ ಬಗ್ಗೆ ಸಿಬಿಐ ತನಿಖೆಯಾಗಬೇಕೆಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಣಿಪ್ಪಾಡಿ, ಬಿ.ವೈ.ವಿಜಯೇಂದ್ರ ನನಗೆ ಯಾವುದೇ ಲಂಚದ ಅಮಿಷವೊಡ್ಡಿಲ್ಲ. 2012-13ರಲ್ಲಿ ವಿಜಯೇಂದ್ರ ಯಾರು ಅಂತಾನೆ ನನಗೆ ಗೊತ್ತಿರಲಿಲ್ಲ. ಅಂದು ಕಾಂಗ್ರೆಸ್ ನ ಸಾಕಷ್ಟು ಜನರು ಲಂಚದ ಅಮಿಷವೊಡ್ಡಿದ್ದರು. ವರದಿ ಜಾರಿ ಮಾಡುವ ಸಲುವಾಗಿ ಬಿಜೆಪಿ ವಿರುದ್ಧ ಚಾಟಿಬೀಸಿದ್ದು ನಿಜ/ ಪ್ರಧಾನಮಂತ್ರಿಗೆ ಪತ್ರ ಬರೆದು ಸಿಬಿಐ ತನಿಖೆಗೆ ಒತ್ತಾಯ ಮಾಡಿದ್ದೆ. ಆದ್ರೆ ಬಿಜೆಪಿಯಿಂದ ನನಗೆ ಯಾವುದೇ ಲಂಚದ ಅಮಿಷ ಬಂದಿಲ್ಲ. ವರದಿ ಅನುಸಾರ ಸಿಬಿಐಗೆ ಕೊಟ್ಟರೆ ಕಾಂಗ್ರೆಸ್ಸಿಗರ ಬುಡಕ್ಕೆ ಬರುತ್ತೆ. ಹೀಗಾಗಿ ಈ ವಿಚಾರವಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಸಿಎಂ, ಪ್ರಿಯಾಂಕ್ ಖರ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಇನ್ನು ವಿಜಯೇಂದ್ರ ವಿರುದ್ಧ ವಕ್ಫ್ ಆಸ್ತಿ ಕಬಳಿಕೆ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಗೆ ಇದು ತಿರುಗುಬಾಣವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.