Share this news

ನವದೆಹಲಿ: ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇಂದು ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದರು.

ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಎಂದು ಎಸ್ಪಿ ಸಂಸದ ಧರ್ಮೇಂದ್ರ ಯಾದವ್ ಹೇಳಿದ್ದಾರೆ.

ಇಂದು ಮತ್ತೊಮ್ಮೆ ಜೆಡಿಯು ನಾಯಕ ಸಂಜಯ್ ಕುಮಾರ್ ಝಾ ಅವರು ಈ ಮಸೂದೆ ಅಗತ್ಯ ಎಂದು ಹೇಳಿದ್ದಾರೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸಬೇಕು ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ ಎಂದು ಹೇಳಿದರು. ಪಂಚಾಯಿತಿ ಚುನಾವಣೆಯನ್ನು ಪ್ರತ್ಯೇಕವಾಗಿ ನಡೆಸಬೇಕು.
ಈ ದೇಶದಲ್ಲಿ ಚುನಾವಣೆಗಳು ಆರಂಭವಾದಾಗ ಏಕಕಾಲಕ್ಕೆ ಚುನಾವಣೆಗಳು ನಡೆಯುತ್ತಿದ್ದವು. ಇದೇನು ಹೊಸ ವಿಷಯವಲ್ಲ. 1967 ರಲ್ಲಿ ಕಾಂಗ್ರೆಸ್ ಹಲವು ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿದಾಗ ಪ್ರತ್ಯೇಕ ಚುನಾವಣೆಗಳು ಪ್ರಾರಂಭವಾದವು ಮತ್ತು ಸರ್ಕಾರಗಳು ವಜಾಗೊಳ್ಳಲು ಪ್ರಾರಂಭಿಸಿದವು. ಸರ್ಕಾರ ಯಾವಾಗಲೂ ಚುನಾವಣಾ ಮೋಡ್‌ನಲ್ಲಿದೆ. ಇದು ಬೃಹತ್ ವೆಚ್ಚವನ್ನು ಒಳಗೊಂಡಿರುತ್ತದೆ.

ಈ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬುದು ಭಾರತದಲ್ಲಿ ಹೊಸ ಪರಿಕಲ್ಪನೆಯಲ್ಲ. 1950ರಲ್ಲಿ ಸಂವಿಧಾನದ ಅಂಗೀಕಾರದ ನಂತರ, 1951ರಿಂದ 1967ರ ನಡುವೆ ಪ್ರತಿ 5 ವರ್ಷಗಳಿಗೊಮ್ಮೆ ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ಅಸೆಂಬ್ಲಿಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲಾಗಿತ್ತು. 1952, 1957, 1962 ಮತ್ತು 1967ರಲ್ಲಿ ಕೇಂದ್ರ ಮತ್ತು ರಾಜ್ಯಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆದವು. ಹೊಸ ರಾಜ್ಯಗಳು ರಚನೆಯಾಗಲು ಪ್ರಾರಂಭಿಸಿದಾಗ ಈ ಪದ್ಧತಿ ಕೊನೆಗೊಂಡಿತು. 1968-1969ರಲ್ಲಿ ವಿವಿಧ ಶಾಸಕಾಂಗ ಸಭೆಗಳ ವಿಸರ್ಜನೆಯ ನಂತರ ಈ ಪದ್ಧತಿಯನ್ನು ಸಂಪೂರ್ಣವಾಗಿ ಕೈಬಿಡಲಾಯಿತು.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸಂಸದ ಇಟಿ ಮೊಹಮ್ಮದ್ ಬಶೀರ್ ಈ ಮಸೂದೆಯನ್ನು ಪ್ರಶ್ನಿಸಿದ್ದು, ಇದು ಭಾರತದ ಪ್ರಜಾಪ್ರಭುತ್ವ, ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದಿದ್ದಾರೆ. ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸದರು ಒನ್ ನೇಷನ್ ಒನ್ ಎಲೆಕ್ಷನ್ ಮಸೂದೆಗೆ ಬೆಂಬಲ ಘೋಷಿಸಿದ್ದಾರೆ.

 

 

Leave a Reply

Your email address will not be published. Required fields are marked *