Share this news

ಬೆಂಗಳೂರು:ಸಂಕ್ರಾಂತಿಹಬ್ಬದ ಬಳಿಕ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡುವ ಸಾದ್ಯತೆಯಿದ್ದು, ಪ್ರತಿ ಲೀಟರ್ ಹಾಲಿನ ದರದಲ್ಲಿ 5 ರೂ. ಏರಿಕೆ ಮಾಡುವಂತೆ ಬುಧವಾರ ನಡೆದ ಹಾಲು ಒಕ್ಕೂಟ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮಾಹಿತಿ ನೀಡಿದ್ದಾರೆ.

ಕೆಎಂಎಫ್ ಈ ಹಿಂದೆ ಪ್ರತಿ ಲೀಟರ್ ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದರಿಂದ ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಿತ್ತು. ಒಂದು ಲೀಟರ್ ಹಾಲಿನ ದರ ಏರಿಕೆ 42 ರಿಂದ 44 ರೂ.ಗೆ ಏರಿಕೆಯಾಗಿತ್ತು. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಿರಲಿಲ್ಲ.

ಇದರಿಂದ ಗ್ರಾಹಕರ ಕೆಂಗಣ್ಣಿಗೆ ಗುರಿಯಾದ ಸರ್ಕಾರ, ಇದನ್ನು ವಾಪಸ್ ಪಡೆಯಲು ಮುಂದಾಗಿದೆ. ಪ್ರತಿ ಲೀಟರ್ ಗೆ 5 ರೂ. ಹೆಚ್ಚಳ ಮಾಡಲು ಮುಂದಾಗಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದು, ದಿಢೀರ್ ಬೆಲೆ ಏರಿಕೆ ಮಾಡುವುದು ಸರಿಯಲ್ಲ. ಹಾಲಿನ ದರ ಹೆಚ್ಚಳಕ್ಕೆ ಯಾವುದೆ ಮಾನದಂಡ ಇಲ್ಲ. ಈ ಬಗ್ಗೆ ತಜ್ಞರ ಸಲಹೆ ಪಡೆದು ಬಳಿಕ ಹಾಲಿನ ದರ ಹೆಚ್ಚಳ ಮಾಡಬೇಕು ಎನ್ನುವ ಒತ್ತಾಯ ಕೇಳಿಬಂದಿದೆ.

 

 

Leave a Reply

Your email address will not be published. Required fields are marked *