ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು ಬಾಣಂತಿಯರ ಪಾಲಿಗೆ ಮರಣ ಮೃದಂಗ ಬಾರಿಸುವಂತಾಗಿದೆ. ಸಿದ್ದರಾಮಯ್ಯನವರೇ, ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ. ಔಷಧ ನಿಯಂತ್ರಣದಲ್ಲಿ ಗೋಲ್ಮಾಲ್ ಆಗುತ್ತಿರುವುದನ್ನು ತಪ್ಪಿಸಿ. ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸರಣಿ ಸಾವಿನ ವಿಚಾರವಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಸರ್ಕಾರಿ ಪ್ರಾಯೋಜಿತ ಕೊಲೆಗೆ ಸಮ. ಇನ್ನೂ ಕೂಡ ಈ ಸರ್ಕಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಅನಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಬಾಣಂತಿಯರ ಸಾವಿಗೆ ಸಂಬAಧಿಸಿದ ನ್ಯಾಯಾಂಗ ತನಿಖೆ ಬಗ್ಗೆ, ಡೆತ್ ಆಡಿಟ್ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಕಳಪೆ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ದೆಹಲಿಗೆ ಹೋಗಿ ದೂರು ಕೊಡುವುದಾಗಿ ಆರೋಗ್ಯ ಸಚಿವರು ಹೇಳಿದ್ದರು. ಆದರೆ ಇನ್ನೂ ಯಾಕೆ ಹೋಗಿ ದೂರು ಕೊಟ್ಟಿಲ್ಲ ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ಈಗಿನ ಆರೋಗ್ಯ ಸಚಿವರು ರಾಜಿನಾಮೆ ಕೊಟ್ಟು ಹೊಸ ಸಚಿವರು ಬಂದರೆ ಹಾಗೂ ಸಕ್ರಿಯವಾಗಿ ಕೆಲಸ ಮಾಡಿದರೆ ಬಾಣಂತಿಯರ ಸಾವಿನ ವಿಚಾರದಲ್ಲಿ ಪರಿಹಾರ ದೊರೆಯಲು ಸಾಧ್ಯವಾಗಬಹುದು. ನಾವು ಪ್ರತಿಪಕ್ಷವಾಗಿ ಕಳೆದ ಒಂದು ವರ್ಷದಲ್ಲಿ ಹೋರಾಟ ಮಾಡಿದಷ್ಟು ಹಿಂದೆAದೂ ಮಾಡಿಲ್ಲ. ನಾವು ಹಳೆಯ ವಿಚಾರಗಳನ್ನು ಎಲ್ಲವನ್ನು ತಾರ್ಕಿಕಂತ್ಯಕ್ಕೆ ಕೊಂಡೊಯ್ದಿದ್ದೇವೆ. ಈ ಪ್ರಕರಣದಲ್ಲೂ ಅಷ್ಟೆ, ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ಮಾಡಿದ್ದೇವೆ. ವರದಿ ದೊರೆತ ಬಳಿಕ ಹೋರಾಟ ಮುಂದುವರಿಸಲಿದ್ದೇವೆ. ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದು ಅಶೋಕ್ ಹೇಳಿದ್ದಾರೆ.