ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು (ಜನವರಿ 15) ಬೆಳಿಗ್ಗೆ 9:45ಕ್ಕೆ ನಿಧನ ಹೊಂದಿದ್ದಾರೆ.
1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ ನಟಿಸುವುದರ ಮೂಲಕ ನಟನಾಗಿ ಗುರುತಿಸಿಕೊಂಡರು. ಆ ನಂತರ ಚಿತ್ರರಂಗದಲ್ಲಿ ತೊಡಗಿಕೊಂಡವರು. ಅದರ ಫಲವೇ 269 ಚಿತ್ರಗಳಲ್ಲಿ ನಟನೆ, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟನೆ ಮಾಡಿದ್ದಾರೆ. ವಿಶೇಷ ಅಂದರೆ, ಇವರ ನಟನೆಯ ಚಿತ್ರಗಳ ಪಟ್ಟಿಯಲ್ಲಿ ಟೈಗರ್ ಪ್ರಭಾಕರ್ ಚಿತ್ರಗಳೇ ಹೆಚ್ಚಾಗಿದೆ. ಇನ್ನೂ ಅವರು ಸರಿಗಮ ವಿಜಿ ಎಂದೇ ಫೇಮಸ್ ಆಗಿದ್ದಾರೆ.