ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಪಿಎಫ್‌ಐ ಸದಸ್ಯನಾಗಿದ್ದ ಅತೀಕ್ ಅಹ್ಮದ್ ಸೇರಿದಂತೆ ಪ್ರಮುಖ ಸಂಚುಕೋರನನ್ನು ಬಂಧಿಸಲಾಗಿದೆ. ಇದೀಗ ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ಗೆ ಸಂಬAಧಿಸಿದAತೆ 21ನೇ ಆರೋಪಿ ಅತೀಕ್ ನನ್ನು ಬಂಧಿಸಲಾಗಿದೆ.
ಪಿಎಫ್‌ಐ ಸದಸ್ಯನಾಗಿದ್ದ ಅತೀಕ್ ಪ್ರವೀಣನ ಕೊಲೆ ಬಳಿಕ ಆರೋಪಿ ಮುಸ್ತಫಾನಿಗೆ ಆಶ್ರಯ ನೀಡಿ ಸಹಾಯ ಮಾಡಿದ್ದ ಬಳಿಕ ಮುಸ್ತಫಾನನ್ನು ಚೆನ್ನೈಗೆ ಕಳಿಸಿ ಪರಾರಿಯಾಗಲು ನೆರವು ನೀಡಿದ್ದ. ಹೀಗಾಗಿ, ಆತನನ್ನು ಬಂಧಿಸಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬAಧ ಇನ್ನೂ 6 ಆರೋಪಿಗಳು ನಾಪತ್ತೆಯಾಗಿದ್ದು, ಆ ಆರೋಪಿಗಳ ಪತ್ತೆಗಾಗಿ ಎನ್‌ಐಎ ತಂಡದಿAದ ಶೋಧ ನಡೆಸಲಾಗುತ್ತಿದೆ. ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ ಘೋಷಣೆ ಮಾಡುವುದಾಗಿ ತಿಳಿಸಲಾಗಿದೆ.
ಪ್ರವೀಣ್ ನೆಟ್ಟಾರ್ ನಂತೆ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದ್ದ ಪಿಎಫ್‌ಐ, ಹತ್ಯೆ ಮಾಡಲೆಂದೇ ಸೀಕ್ರೆಟ್ ತಂಡಗಳ ರಚನೆ ಮಾಡಿತ್ತು ಎನ್ನಲಾಗಿದೆ. ಈ ಸೀಕ್ರೆಟ್ ತಂಡಗಳನ್ನು ಪಿಎಫ್‌ಐ ಸರ್ವಿಸ್ ಟೀಮ್ಸ್ ಎಂದು ಕರೆಯಲಾಗುತ್ತಿತ್ತು. ಈ ತಂಡಗಳಿಗೆ ವಿಶೇಷ ತರಬೇತಿ ಸಹ ನೀಡಲಾಗಿತ್ತು. ಈ ತಂಡಗಳಿಗೆ ಶಸ್ತ್ರಾಸ್ತ್ರ ಹಾಗೂ ಕಣ್ಗಾವಲು ತರಬೇತಿ ಸಹ ನೀಡಲಾಗಿತ್ತು ಎನ್ನುವ ಮಾಹಿತಿ ಲಭಿಸಿದೆ.