ನವದೆಹಲಿ : ದೇಶದಲ್ಲಿ ಬಡತನ ನಿರ್ಮೂಲನೆಗೆ ಕೇಂದ್ರ ಸರ್ಕಾರವು ಮಹತ್ವದ ಕ್ರಮಕೈಗೊಂಡಿದ್ದು, ಈಗಾಗಲೇ ನಮ್ಮ 10 ವರ್ಷದ ಆಡಳಿತದಲ್ಲಿ 25 ಕೋಟಿ ಜನಸಂಖ್ಯೆಯನ್ನ ಬಡತನದಿಂದ ಮೇಲೆತ್ತಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದರು. ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿ ಈ ಮಾಹಿತಿ ನೀಡಿದರು.
ನಮ್ಮ ಸರ್ಕಾರ ಜನರಿಗೆ ನಿಜವಾದ ಅಭಿವೃದ್ಧಿಯನ್ನು ಒದಗಿಸಿದೆ. ಬಡವರಿಗೆ 4 ಕೋಟಿ ಮನೆಗಳನ್ನು ನೀಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸ್ವಂತ ಮನರಂಜನೆಗಾಗಿ ಬಡವರ ಗುಡಿಸಲುಗಳಲ್ಲಿ ಫೋಟೋ ಸೆಷನ್ ನಡೆಸಿ ಬಡತನವನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು