ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಹಾಗೂ ಆಡಳಿತ ವೈಫಲ್ಯ ಖಂಡಿಸಿ ಕಾರ್ಕಳ ಬಿಜೆಪಿ ವತಿಯಿಂದ ಫೆ.06ರಂದು ಬೃಹತ್ ಪ್ರತಿಭಟನೆ ನಡೆಯಲಿದೆ.
ಅಗತ್ಯ ವಸ್ತುಗಳು ಹಾಗೂ ದಿನಬಳಕೆ ಸಾಮಾಗ್ರಿಗಳ ಬೆಲೆ ಹೆಚ್ಚಳ, ಬಡವರ ರೇಷನ್ ಕಾರ್ಡ್ ರದ್ಧತಿ, ಹಾಲಿನ ಬೆಲೆ ಹೆಚ್ಚಳ ಮಾಡಿದ್ದರೂ ಹೈನುಗಾರರ ಹಾಲಿನ ಸಬ್ಸಿಡಿ ಬಾಕಿ, ವಾಸದ ಉದ್ದೇಶಕ್ಕೆ ಭೂ ಪರಿವರ್ತನೆಗೆ 9/11 ಸಮಸ್ಯೆ, ಅಕ್ರಮ ಸಕ್ರಮ ಅರ್ಜಿ ತಿರಸ್ಕೃತ ಸೇರಿದಂತೆ ಹಲವಾರು ಸಮಸ್ಯೆಗಳ ವಿರುದ್ಧ ಕಾರ್ಕಳ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದೆ.
ಇದಲ್ಲದೇ ಮೂಲಸೌಕರ್ಯಗಳಾದ ರಸ್ತೆ, ನೀರು, ವಸತಿ ಯೋಜನೆಗಳಿಗೆ ಸರ್ಕಾರ ನಯಾಪೈಸೆ ಅನುದಾನ ನೀಡುತ್ತಿಲ್ಲ, ಗ್ಯಾರಂಟಿಗಳ ಹೆಸರಿನಲ್ಲಿ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೂ ಅನುದಾನ ನೀಡುತ್ತಿಲ್ಲ. ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಅನುದಾನದ ಕೊರತೆಯಿಂದ ಸಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಅನುದಾನದ ಕೊರತೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳು ಸಿಗದೇ ಬಡರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಟ್ಟಟ ಸಾಮಾಗ್ರಿಗಳ ಪೂರೈಕೆಗೂ ಸರ್ಕಾರ ಅಡ್ಡಿಪಡಿಸುತ್ತಿದ್ದು ಇದರಿಂದ ಬಡವರು ಮನೆ ಕಟ್ಟಲು ಕಲ್ಲು, ಮರಳು, ಜಲ್ಲಿ ಸಿಗದೇ ತೀವೃ ತೊಂದರೆ ಎದುರಿಸುವಂತಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಿಂದೂಗಳ ಮೇಲಿನ ದಬ್ಬಾಳಿಕೆ ಮಿತಿಮೀರಿದ್ದು, ಮತಾಂಧ ಶಕ್ತಿಗಳು ಸರ್ಕಾರದ ಕೃಪಾಕಟಾಕ್ಷದಿಂಸ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತಿದ್ದಾರೆ. ವಕ್ಫ್ ಮಂಡಳಿಯ ಮೂಲಕ ಬಡವರ ,ರೈತರ ಹಾಗೂ ಹಿಂದೂಗಳ ಮಠ, ಮಂದಿರಗಳ ಜಮೀನು ಕಬಳಿಸುವ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದ್ದು, ಇಂತಹ ಗಂಭೀರ ಸಮಸ್ಯೆಗಳ ವಿರುದ್ಧ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕಾರ್ಕಳ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ