ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ sಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಸದೆಬಡಿದಿದೆ. ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೃತ ಉಗ್ರರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 4-5ರ ಮಧ್ಯರಾತ್ರಿ ಎಲ್‌ಒಸಿಯಲ್ಲಿ ಪಾಕಿಸ್ತಾನಿ ನುಸುಳುಕೋರರ ಹೊಂಚುದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತು ಮತ್ತು 2-3 ಪಾಕಿಸ್ತಾನಿ ಸೇನಾ ಸಿಬ್ಬಂದಿ ಸೇರಿದಂತೆ ಏಳು ಜನರನ್ನು ಗುಂಡಿಕ್ಕಿ ಕೊಂದಿತು ಎಂದು ಮೂಲಗಳು ತಿಳಿಸಿವೆ.
ಗಡಿಯಾಚೆಗಿನ ಕಾರ್ಯಾಚರಣೆಗಳಿಗಾಗಿ ವಿಶೇಷ ಘಟಕಗಳಾದ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ (ಬಿಎಟಿ) ಪೋಸ್ಟ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಾಗ ಭಾರತೀಯ ಸೇನೆಯು ಹೊಂಚುದಾಳಿ ನಡೆಸಿತು .ಮೃತ ಏಳು ಜನರಲ್ಲಿ 2-3 ಜನರು ಪಾಕಿಸ್ತಾನಿ ಸೇನಾ ಸೈನಿಕರಾಗಿದ್ದರು ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರು ಬಹುಶಃ ಅಲ್-ಬದರ್ ಗುಂಪಿನ ಸದಸ್ಯರಾಗಿರಬಹುದು ಎನ್ನಲಾಗುತ್ತಿದೆ.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.