ಹೆಬ್ರಿ: ಒಣಗಿದ್ದ ಅಡಿಕೆ ಮರವನ್ನು ಹಗ್ಗದ ಸಹಾಯದಿಂದ ಎಳೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಮರ ತುಂಡಾಗಿ ವ್ಯಕ್ತಿಯ ತಲೆಯ ಮೇಲೆ ಬಿದ್ದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಫೆ.6 ರಂದು ಮೃತಪಟ್ಟಿದ್ದಾರೆ. ವರಂಗ ಗ್ರಾಮದ ನಿವಾಸಿ ರಾಮ (62ವ) ಮೃತಪಟ್ಟವರು.
ರಮ ಸವರು ಫೆ.4 ರಂದು ಮದ್ಯಾಹ್ನ ಕಟ್ಟಿಗೆ ಸಲುವಾಗಿ ವರಂಗ ಗ್ರಾಮದ ಮೂಡುಕುಡೂರು ಕೆಳಗಿನ ಮನೆಯಲ್ಲಿರುವ ನಮ್ಮ ತೋಟದಲ್ಲಿರುವ ಒಣಗಿದ ಅಡಿಕೆ ಮರವನ್ನು ಹಗ್ಗ ಹಾಕಿ ಎಳೆಯುತ್ತಿರುವಾಗ ಆಕಸ್ಮಿಕವಾಗಿ ಆಯತಪ್ಪಿ ಒಣಗಿದ ಅಡಿಕೆ ಮರವು ತುಂಡಾಗಿ ರಾಮ ರವರ ತಲೆಯ ಮೇಲೆ ಬಿದ್ದಿತ್ತು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಫೆ.6 ರಂದು ರಾಮ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅವರನ್ನು ಮಣಿಪಾಲದಿಂದ ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದರು. ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಬರುತ್ತಿದ್ದ ಮಾರ್ಗ ಮಧ್ಯೆ ರಾಮ ಅವರಲ್ಲಿ ಯಾವುದೇ ಚಲನೆ ಇಲ್ಲದಿದ್ದಾಗ, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪರೀಕ್ಷಿಸಿದಾಗ ಅವರು ಮೃತಪಟ್ಟಿದ್ದರು.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.