ಕಾರ್ಕಳ:ಸಮಾಜವನ್ನು ವಿಭಜಿಸುವ ಮನಃಸ್ಥಿತಿಯ ಆಫ್ ಹಾಗೂ ಹಿಂದು ವಿರೋಧಿ ಕಾಂಗ್ರೆಸ್ ಪಕ್ಷದ ದುರಂಹಕಾರಕ್ಕೆ ಬೇಸತ್ತ ಜನರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಬಿಜೆಪಿಯನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿದ್ದಾರೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ವಿಭಜಕ ಮನಃಸ್ಥಿತಿಯ ಆಪ್ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ನೆಲೆ ಕಳೆದುಕೊಂಡಿದೆ.ಸತತ ಮೂರನೇ ಬಾರಿಗೆ ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ ಸಂಪಾದಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ದೆಹಲಿಯನ್ನು ಆಳಲಿದೆ.
ಪ್ರಧಾನಿ ನರೇಂದ್ರ ಮೋದಿಯವರ ದೃಢ ನಾಯಕತ್ವದಲ್ಲಿ ಈಗ ದೆಹಲಿ ಗದ್ದುಗೆ ಏರಿದ್ದೇವೆ. ಈ ವಿಜಯ ಯಾತ್ರೆ ದೇಶಾದ್ಯಂತ ಮುಂದುವರಿಯುತ್ತದೆ. ಕೆಲವೇ ವರ್ಷದಲ್ಲಿ ಕರ್ನಾಟಕದಲ್ಲಿ ಮತ್ತೆ ಕಮಲ ಅರಳಲಿದೆ. ದೆಹಲಿ ಗೆಲುವಿಗೆ ಕಾರಣರಾದ ಪ್ರತಿಯೊಬ್ಬರಿಗೂ ಸುನಿಲ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.