ಶಿವಮೊಗ್ಗ : ಕರ್ನಾಟಕದ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಕಳೆದ ಎರಡು ದಶಕಗಳಿಂದ ಶಸ್ತಾçಸ್ತç ಕ್ರಾಂತಿಯ ಮೂಲಕ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ನಿದ್ದೆಗೆಡಿಸಿದ್ದ ನಕ್ಸಲರು, ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಮ್ ಗೌಡ ಹತನಾದ ಬಳಿಕ ಅಳಿದುಳಿದ ನಕ್ಸಲರ ಜಂಘಾಬಲವೇ ಉಡುಗಿಹೋಗಿತ್ತು. ಈ ಘಟನೆಯ ಬೆನ್ನಲ್ಲೇ ಐವರು ನಕ್ಸಲರು ಸಿಎಂ ಸಿದ್ಧರಾಮಯ್ಯ ಎದುರು ಶರಣಾಗಿದ್ದರು. ನಕ್ಸಲರ ಮಹಾಶರಣಾಗತಿಯಾದರೂ ಇವರ ವಿರುದ್ಧದ ಪ್ರಕರಣಗಳನ್ನು ಕೈಬಿಡಲು ಕಾನೂನಿನಲ್ಲಿ ಅವಕಾಶವಿಲ್ಲ. ಅವರ ವಿರುದ್ಧ ಕೊಲೆ,ಕೊಲೆ ಯತ್ನ ಮುಂತಾದ ಪ್ರಕರಣಗಳು ದಾಖಲಾದ ಹಿನ್ನಲೆಯಲ್ಲಿ ಚಿಕಮಗಳೂರು ಪೊಲೀಸರು ಸೋಮವಾರ ಮಾಜಿ ನಕ್ಸಲ್ ಮುಂಡಗಾರು ಲತಾ ಮತ್ತು ವನಜಾಕ್ಷಿಯ ಅವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಜೆಎಂಎಫ್‌ಸಿ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದರು. ನ್ಯಾಯಾಧೀಶೆ ಗೀತಾಮಣಿ ಅವರು ಇಬ್ಬರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು, ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿತ್ತು. ಕಬಿನಿ ದಳಂ ನಾಯಕ ನಕ್ಸಲ್ ವಿಕ್ರಮ್ ಗೌಡ ಪೊಲೀಸರ ಗುಂಡಿಗೆ ಬಲಿಯಾಗುವ ಮುನ್ನ ಸುಧೀರ್ಘ ಕಾಲದಿಂದ ನಕ್ಸಲ್ ಚಟುವಟಿಕೆ ಕ್ಷೀಣಿಸಿತ್ತು. ಈ ನಡುವೆ ವಿಕ್ರಮ್ ಗೌಡನ ತಂಡ ಚಿಕಮಗಳೂರಿನಲ್ಲಿ ಓಡಾಟ ನಡೆಸುತ್ತಿರುವ ಪೊಲೀಸರು ಆತನನ್ನು ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ಪೀತಬೈಲು ಅರಣ್ಯದಲ್ಲಿ ಹೊಡೆದರುಳಿಸಿದ್ದರು. ಇದರಿಂದ ನಕ್ಸಲ್ ಹೋರಾಟಕ್ಕೆ ಬಹುದೊಡ್ಡ ಹಿನ್ನಡೆಯಾಗಿತ್ತು. ಇದೀಗ ನಕ್ಸಲರ ಮಹಾಶರಣಾಗತಿಯಿಂದ ಬಹುತೇಕ ಕರ್ನಾಟಕದಿಂದ ನಕ್ಸಲ್ ವಾದ ಕ್ಷೀಣಿಸುವ ಹಂತದಲ್ಲಿದೆ.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.