ಕಾರ್ಕಳ: ಕಾರ್ಕಳ ತಾಲೂಕಿನ ನೂರಾಳ್‌ಬೆಟ್ಟು ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದವರು ಫೆ.21 ರಂದು ಕೊಳೆತ ಶವವಾಗಿ ಪತ್ತೆಯಾಗಿದ್ದಾರೆ.
ನೂರಾಳ್‌ಬೆಟ್ಟುವಿನ ಸುಜಯ (36ವ) ಮೃತಪಟ್ಟವರು.
ಸುಜಯ ಅವರು ಅವಿವಾಹಿತರಾಗಿದ್ದು ಕುಡಿತದ ಚಟ ಹೊಂದಿದ್ದರು. ಫೆ.18 ರಂದು ಸಂಜೆ ಮನೆಯಿಂದ ಹೊರ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಅಣ್ಣ ಉದಯ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ಸುಜಯರನ್ನು ಹುಡುಕಾಡುತ್ತಿದ್ದ ಸಂದರ್ಭ ಫೆ.21 ಶುಕ್ರವಾರ ಮನೆಯಿಂದ 1ಳಿ ಕೀ ಮೀ ದೂರದಲ್ಲಿ ಕೊಳೆತ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಪರಿಶೀಲಿಸಿದಾಗ ಸುಜಯ ಮದ್ಯಪಾನ ಚಟದ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮರಕ್ಕೆ ಹತ್ತಿ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳದಲ್ಲಿ ಕಲ್ಲುಗಳು ಇರುವುದರಿಂದ ದೇಹದ ಭಾಗಗಳಿಗೆ ಗಾಯಗಳಾಗಿವೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
