ಬೆಂಗಳೂರು: ರಾಜ್ಯದಲ್ಲಿನ ಹಳೇ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಮತ್ತೊಮ್ಮೆ ಗಡುವು ವಿಸ್ತರಣೆಯಾಗಿದೆ. ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 31ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ನೀಡಲಾಗಿತ್ತು. ಇದೀಗ ಸಾರಿಗೆ ಇಲಾಖೆ ಮತ್ತೆ ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿದೆ.
ಕರ್ನಾಟಕದಲ್ಲಿ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳಿವೆ. ಇದರಲ್ಲಿ 58 ಲಕ್ಷ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯಾಗಿವೆ. 2019ರ ಏಪ್ರಿಲ್ 1ರ ಹಿಂದಿನ ಎಲ್ಲ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೆ ಕಡ್ಡಾಯವಾಗಿದೆ.
ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್ ಪ್ಲೆಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಎಸ್‌ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ.

