ಕಾರ್ಕಳ: ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ಫೆ.26 ರಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಿಯ್ಯಾರಿನ ಗೀತಾ (53) ಆತ್ಮಹತ್ಯೆ ಮಾಡಿಕೊಂಡವರು.
ಗೀತಾ ಅವರು ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಹಾಗೂ ವಿಪರೀತ ಅಮಲು ಪದಾರ್ಥ ಸೇವಿಸುವ ಚಟವನ್ನೂ ಆರಂಭಿಸಿದ್ದರು. ಇದೇ ಕಾರಣಕ್ಕೆ ಮನನೊಂದು ಫೆ.26 ರಂದು ತನ್ನ ಮನೆಯ ಹಿಂಭಾಗ ಇರುವ ಕೊಟ್ಟೆಗೆಯಲ್ಲಿ ಪಕ್ಕಾಸಿಗೆ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
