Share this news

 

 

 

ಬೆಂಗಳೂರು: ಇಡ್ಲಿ, ಗೋಬಿ ಸೇರಿದಂತೆ ಅನೇಕ ಆಹಾರಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ಆಹಾರ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿತ್ತು. ಜತೆಗೆ, ಆಹಾರಗಳ ತಯಾರಿ ಹಾಗೂ ಮಾರಾಟ ಸಂಬAಧ ಕೆಲವೊಂದು ಕಠಿಣ ನಿಯಮಗಳನ್ನು ಜಾರಿ ಮಾಡಿತ್ತು. ಆ ನಂತರ ಕುಡಿಯುವ ನೀರು ಸುರಕ್ಷಿತವೇ ಎಂಬ ಬಗ್ಗೆ ಪರಿಶೀಲನೆಗೆ ಮುಂದಾಗಿತ್ತು. ಇದೀಗ ಪರೀಕ್ಷಾ ವರದಿ ಬಂದಿದ್ದು, ಆಘಾತಕಾರಿ ವಿಚಾರ ಬಯಲಾಗಿದೆ.

ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಬಾಟಲ್ ನೀರಿನಲ್ಲಿ ಮಿನರಲ್ ಕೂಡ ಇರುವುದಿಲ್ಲ. ಸಾಕಷ್ಟು ಕಂಪನಿಗಳ ವಾಟರ್ ಬಾಟಲ್ ಅಸುರಕ್ಷಿತ ಎಂದು ವರದಿ ತಿಳಿಸಿದೆ. ನಕಲಿ ವಾಟರ್ ಬಾಟಲ್ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಆಹಾರ ಇಲಾಖೆ ಸಮರ ಮುಂದುವರಿಸಿದೆ. ವಿವಿಧೆಡೆ ದಾಳಿ ನಡೆಸಿ ವಾಟರ್ ಬಾಟಲ್ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಮತ್ತೊಂದೆಡೆ, ಈಗಾಗಲೇ ಪನೀರ್ ಮತ್ತು ಐಸ್ ಕ್ರೀಮ್ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಿರುವ ಆಹಾರ ಇಲಾಖೆ ಇದೀಗ ಮತ್ತೊಂದು ಸುತ್ತಿನ ಕಾರ್ಯಾಚರಣೆ ಮುಂದುವರಿಸಿದೆ. ಬೆಂಗಳೂರಿನ ವಿವಿಧ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪನೀರ್ ಹಾಗೂ ಐಸ್ ಕ್ರೀಮ್ ಗಳಲ್ಲಿ ರಾಸಾಯನಿಕ ಬಳಕೆ ಆರೋಪದ ಹಿನ್ನೆಲೆಯಲ್ಲಿ ಇಲಾಖೆ ಈ ಕ್ರಮ ಕೈಗೊಂಡಿದೆ. ಈ ಬಗ್ಗೆ ಸರ್ಕಾರ ಇನ್ನೇನು ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

 

 

Leave a Reply

Your email address will not be published. Required fields are marked *