Share this news

 

 

 

 

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಬಾಡಿಗೆ ಮನೆಯಲ್ಲಿ 14 ಕೋಟಿ,ರೂ ಮೌಲ್ಯದ ನಕಲಿ ನೋಟುಗಳು ಪತ್ತೆಯಾಗಿದ್ದು, ತನಿಖೆಗೆ ಇಳಿದ ಪೊಲೀಸರೇ ದಂದಾಗಿದ್ದಾರೆ. ಗಾಂಧಿನಗರದ ನೂರಜಾನ್ ಜುಂಜುವಾಡ್ಕರ ಎಂಬವವರ ಮನೆಯೊಂದರಲ್ಲಿ ಗೋವಾ ಮೂಲದ ಅರ್ಷದ್ ಖಾನ್ ಎಂಬಾತ ಬಾಡಿಗೆದಾರನಾಗಿ ವಾಸ್ತವ್ಯವಿದ್ದ. ಕಳೆದ ಒಂದು ತಿಂಗಳಿನಿAದ ಈತ ಆ ಮನೆಯಲ್ಲಿ ಇಲ್ಲದೇ ಇರುವುದನ್ನು ಗಮನಿಸಿ ಮತ್ತು ಆ ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು, ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ದಾಂಡೇಲಿ ನಗರ ಠಾಣೆಯ ಪೊಲೀಸರು ಮನೆಗೆ ಬಂದು ಬಾಗಿಲು ತೆರೆಯುತ್ತಿದ್ದಂತೆಯೇ, 500 ರೂ. ಮುಖ ಬೆಲೆಯ ಕಂತೆ ಕಂತೆ ನೋಟುಗಳು ಕಾಣಿವೆ. ಒಮ್ಮೆಲೇ ದಂಗಾದ ಪೊಲೀಸರು ಸ್ಥಳಕ್ಕೆ ಹಿರಿಯ ಪೊಲೀಸರನ್ನು ಕರೆಸಿದ್ದಾರೆ. ಕೂಡಲೇ ಮನೆ ಮಾಲೀಕರುವ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಗೆ ಕರೆ ಮಾಡಿದ್ದಾರೆ.
ಬೆಳಗ್ಗೆ ಅನುಮಾನ ಬಂದು ಮನೆ ಮಾಲೀಕರು ಕೆಲ ನೋಟುಗಳನ್ನು ಕಂತೆಯಿAದ ಬಿಡಿಸಿ ನೋಡಿದಾಗ, 500 ರೂ. ಮುಖಬೆಲೆಯ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇರುವ ಮತ್ತು ಗವರ್ನರ್ ಸಹಿ ಇಲ್ಲದೆ ಇರುವ, ಜೊತೆಗೆ ನೋಟಿಗೆ ಸಂಖ್ಯೆಯಿರುವ ಜಾಗದಲ್ಲಿ ಸೊನ್ನೆಯನಷ್ಟೇ ನಮೂದಿಸಿರುವ ನೋಟುಗಳು ಪತ್ತೆಯಾಗಿವೆ. ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ನಕಲಿ ಐವತ್ತು ನೋಟುಗಳ ಬಂಡಲ್ ಇದೆ ಎಂಬುವುದು ದೃಢವಾಗಿದೆ. ಇನ್ನು ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅವುಗಳನ್ನು ಸದ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೋಟಿಗಟ್ಟಲೇ ನಕಲಿ ನೋಟು ಸಿಕ್ಕಿರುವ ಸಂಬAಧ ಆ ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್?ನನ್ನು ವಶಕ್ಕೆ ಪಡೆಯಲು ದಾಂಡೇಲಿ ಪೊಲೀಸರು ಕ್ರಮ ಆರಂಭಿಸಿದ್ದಾರೆ. ಈಗಾಗಲೇ ಅರ್ಷದ್ ಖಾನ್‌ನನ್ನು ಪೊಲೀಸರು ಸಂಪರ್ಕಿಸಿದ್ದು, ಆತ ಗೋವಾದಲ್ಲಿ ಇದ್ದು ಬರುವುದಾಗಿ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. ಈ ಹಿಂದೆ ಸಹ ದಾಂಡೇಲಿಯಲ್ಲಿ ನಕಲಿ ಕರೆನ್ಸಿ ನೋಟು ಪತ್ತೆಯಾಗಿದ್ದು ಸದ್ದು ಮಾಡಿತ್ತು. ಸದ್ಯ ಮತ್ತೆ ಕೋಟಿಗಟ್ಟಲೇ ನಕಲಿ ನೋಟು ಪತ್ತೆಯಾಗಿದ್ದು, ಇದರ ಹಿಂದಿನ ಅಸಲಿ ಸತ್ಯವಾದರೂ ಏನು ಎಂಬ ಚರ್ಚೆ ಸಾರ್ವಜನಿಕರಲ್ಲಿ ಜೋರಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಪತ್ತೆಯಾದ ನಕಲಿ ನೋಟುಗಳ ಕುರಿತು ಭಾರೀ ಅನುಮಾನ ವ್ಯಕ್ತವಾಗಿದ್ದು, ಇದು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಕೆಯಾಗುತ್ತಿತೇ ಎನ್ನುವ ಅನುಮಾನ ಮೂಡಿದೆ. ಪೊಲೀಸರು ಈ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ

 

 

 

Leave a Reply

Your email address will not be published. Required fields are marked *