ಉಡುಪಿ : ಇಲ್ಲಿನ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಪ್ರಿ-ವೆಡ್ಡಿಂಗ್ ಮತ್ತು ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ನಿಷೇಧಿಸಿ ಪರ್ಯಾಯ ಪುತ್ತಿಗೆ ಮಠ ಸೂಚನೆ ಹೊರಡಿಸಿದೆ.
ಕೃಷ್ಣಮಠ ರಥಬೀದಿ ಪಾರಂಪರಿಕ ಕಟ್ಟಡವಿರುವ ಸ್ಥಳ. ಪ್ರಿ-ವೆಡ್ಡಿಂಗ್, ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಹೆಸರಿನಲ್ಲಿ ಬೆಳ್ಳಂಬೆಳಗ್ಗೆ ಮಠದ ಆವರಣದಲ್ಲಿ ಅಸಭ್ಯ ವರ್ತನೆ ಕಾಣಿಸುತ್ತಿದೆ.
ಫೋಟೋಶೂಟ್ ನೆಪದಲ್ಲಿ ರಥಬೀದಿಯಲ್ಲಿ ಪ್ರೇಮ ಸಲ್ಲಾಪ ನಡೆಯುತ್ತಿದೆ. ಕೇರಳ, ಬೆಂಗಳೂರು ಕಡೆಯಿಂದ ಬರುವ ಫೋಟೋಗ್ರಾಫರ್ ಗಳ ಹಾವಳಿ ಹೆಚ್ಚಾಗಿದೆ. ಹಾಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಠದ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.