ಕಾರ್ಕಳ : ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ಸಬ್ ಇನ್ಸ್ ಪೆಕ್ಟರ್ ಆಗಿ ಪ್ರಸನ್ನ ಎಂ ಎಸ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಕಾರ್ಕಳ ನಗರ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಅವರು ಪಡುಬಿದ್ರಿ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದರು. ಇಂದು ಕಾರ್ಕಳ ಗ್ರಾಮಾಂತರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅವರಿಗೆ ಈ ಬಾರಿ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಲಾಗಿತ್ತು.
ಕಾರ್ಕಳ ಗ್ರಾಮಾಂತರ ಠಾಣೆ ಸಬ್ ಇನ್ಸ್ ಪೆಕ್ಟರ್ ಆಗಿದ್ದ ದಿಲೀಪ್ ವರ್ಗಾವಣೆ ಆಗಿದ್ದಾರೆ. ಅವರಿಗೆ ಇನ್ನಷ್ಟೇ ಯಾವ ಠಾಣೆ ಎಂದು ತಿಳಿದು ಬರಬೇಕಿದೆ.