ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಇನ್ನೂ 4 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಅಬ್ದುಲ್ ರೆಹಮಾನ್, ನೌಷದ್, ಅಬ್ದುಲ್ ನಾಸೀರ್, ಅತೀಕ್ ಅಹ್ಮದ್ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಕಳೆದ ಜನವರಿಯಲ್ಲಿ ಅರೆಸ್ಟ್ ಆಗಿದ್ದ ಅತೀಕ್ ಅಹ್ಮದ್ ನಾಲ್ವರ ಪೈಕಿ ಮೂವರು ಪಿಎಫ್ಐ ಸಂಘಟನೆಗೆ ಸೇರಿದ್ದವರು. ಪ್ರವೀಣ್ ಹತ್ಯೆ ಕೇಸ್ನಲ್ಲಿ ಆರೋಪಿಗಳ ಸಂಖ್ಯೆ 27ಕ್ಕೇರಿಕೆಯಾಗಿದೆ.
2022ರಲ್ಲಿ ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಇಂದು ಇನ್ನೂ 4 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಇದುವರೆಗೂ ಈ ಪ್ರಕರಣದಲ್ಲಿ 21 ಆರೋಪಿಗಳನ್ನ ಬಂಧಿಸಲಾಗಿದ್ದು, ಓರ್ವ ಮೃತಪಟ್ಟಿದ್ದಾನೆ. 2022ರ ಜು.26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು.