ಉಡುಪಿ : ಮಲ್ಪೆ ಬೀಚ್ ಬಳಿ ಇರುವ ಹೋಟೆಲ್ ವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಹೋಟೆಲ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಸಚಿನ್ ಮಾಲಕತ್ವದ ಅಮ್ಮ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೋಟೆಲ್ ಸಂಪೂರ್ಣ ಅಗ್ನಿಗಾಹುತಿಯಾಗಿದೆ. ಸುಮಾರು 15 ಲಕ್ಷ ರೂಪಾಯಿ ವೆಚ್ಚದ ವಸ್ತುಗಳು ಸುಟ್ಟು ಕರಕಲಾಗಿದ್ದು, ಐದಾರು ಫ್ರಿಡ್ಜ್, ಗ್ರೈಂಡರ್, ಪಾತ್ರೆ, ದಿನಸಿ ಬೆಂಕಿಗಾಹುತಿಯಾಗಿದೆ.
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಹೋಟೆಲ್ ಬಂದ್ ಮಾಡಿ ಹೋದ ನಂತರ ಶಾರ್ಟ್ ಸರ್ಕ್ಯೂಟ್ ಆಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಆಗಮಿಸಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಕಿ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ