Share this news

 

 

 

 

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಕರ್ನಾಟಕದ ಜನರೂ ಇದ್ದಾರೆ. ಈ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್ ಎನ್ನುವ ವಿಚಾರ ಬಹಿರಂಗಗೊAಡಿದೆ. ಈತ ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ. ಸೈಫುಲ್ಲಾ ಖಾಲಿದ್‌ನನ್ನು ಸೈಫುಲ್ಲಾ ಕಸೂರಿ ಎಂದೂ ಕರೆಯುತ್ತಾರೆ. ಆತ ಲಷ್ಕರ್ ಎ ತೊಯ್ಬಾ ಉಪ ಮುಖ್ಯಸ್ಥನಾಗಿದ್ದಾನೆ, ಅಂತಾರಾಷ್ಟ್ರೀಯ ಭಯೋತ್ಪಾದಕ ಹಫೀಜ್ ಸಯೀದ್‌ಗೆ ಆಪ್ತ ಎನ್ನಲಾಗಿದೆ. ಆತನಿಗೆ ಭಾರತದ ಪ್ರಧಾನಿಗಿಂತ ಹೆಚ್ಚಿನ ಭದ್ರತೆ ಇದೆಯಂತೆ. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತಿದೊಡ್ಡ ದಾಳಿ ಇದಾಗಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಹೊತ್ತುಕೊಂಡಿದೆ. ಕೊಲ್ಲಲ್ಪಟ್ಟವರಲ್ಲಿ ಇಬ್ಬರು ವಿದೇಶಿಯರು (ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ನೇಪಾಳದವರು) ಮತ್ತು ಇಬ್ಬರು ಸ್ಥಳೀಯ ನಿವಾಸಿಗಳು ಸೇರಿದ್ದಾರೆ. ಮೃತಪಟ್ಟ 26 ಜನರಲ್ಲಿ 22 ಜನರನ್ನು ಗುರುತಿಸಲಾಗಿದ್ದು, ಉಳಿದವರನ್ನು ಗುರುತಿಸಲಾಗುತ್ತಿದೆ.

ಸೈಫುಲ್ಲಾ ಖಾಲಿದ್ ಪಾಕಿಸ್ತಾನದಲ್ಲಿ ಎಷ್ಟು ಪ್ರಭಾವ ಹೊಂದಿದ್ದಾನೆAದರೆ ಪಾಕಿಸ್ತಾನಿ ಸೇನಾ ಅಧಿಕಾರಿಗಳು ಆತನ ಮೇಲೆ ಹೂಮಳೆ ಸುರಿಸಿ ಬರಮಾಡಿಕೊಳ್ಳುತ್ತಾರೆ. ಆತ ಪಾಕಿಸ್ತಾನದಲ್ಲಿ ವಿಐಪಿಯಂತೆ ಓಡಾಡುತ್ತಾನೆ. ಸೈಫುಲ್ಲಾ ಎರಡು ತಿಂಗಳ ಹಿಂದೆ ಪಾಕಿಸ್ತಾನ ಆಕ್ರಮಿತ ಪಂಜಾಬ್‌ನ ಕಂಗನ್‌ಪುರ ಪ್ರದೇಶಕ್ಕೆ ಬಂದಿದ್ದ, ಅಲ್ಲಿ ಒಂದು ಕಾರ್ಯಕ್ರಮವನ್ನು ಪಾಕಿಸ್ತಾನಿ ಸೇನೆಯ ಕರ್ನಲ್ ಜಾಹಿದ್ ಜರೀನ್ ಖಟ್ಟಕ್ ಆಯೋಜಿಸಿದ್ದರು. ಅಲ್ಲಿ ಖಾಲಿದ್ ಭಾರತೀಯ ಸೇನೆ ಮತ್ತು ಭಾರತದ ಜನರ ವಿರುದ್ಧ ಉಗ್ರ ಭಾಷಣ ಮಾಡಿದ್ದ.

ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಸಭೆಯಲ್ಲಿ ಸೈಫುಲ್ಲಾ ವಿಷ ಕಾರಿದ್ದ.ಲಷ್ಕರೆ ರಾಜಕೀಯ ವಿಭಾಗಗಳಾದ ಪಿಎಂಎAಎಲ್ ಮತ್ತು ಎಸ್‌ಎಂಎಲ್ ಅಬೋಟಾಬಾದ್ ಅರಣ್ಯಗಳಲ್ಲಿ ಭಯೋತ್ಪಾದಕ ಶಿಬಿರವನ್ನು ಆಯೋಜಿಸಿದ್ದವು. ಕಾಶ್ಮೀರದಲ್ಲಿ 370 ನೇ ವಿಧಿಯನ್ನು ತೆಗೆದುಹಾಕಿದ ನಂತರ, ಐಎಸ್‌ಐ ಟಿಆರ್‌ಎಫ್ ಅನ್ನು ರಚಿಸಿತು. ಟಿಆರ್‌ಎಫ್ ಅನ್ನು ಲಷ್ಕರೆ ಹಣಕಾಸು ಮಾರ್ಗಗಳ ಮೂಲಕ ನಡೆಸಲಾಗುತ್ತದೆ. ಗುಪ್ತಚರ ಸಂಸ್ಥೆ ರಾ ಮತ್ತು ಭಾರತೀಯ ಸೇನೆಯ ಗುಪ್ತಚರ ಸಂಸ್ಥೆಗಳ ಪ್ರಕಾರ, ಸೈಫುಲ್ಲಾ ಖಾಲಿದ್ ಪಾಕಿಸ್ತಾನಿ ಸೇನೆಯ ವಿಶೇಷ ವ್ಯಕ್ತಿ ಮಾತ್ರವಲ್ಲದೆ, ಭಾರತದ ನಂಬರ್ ಒನ್ ಶತ್ರು ಹಫೀಜ್ ಸಯೀದ್‌ನ ಬಲಗೈ ಬಂಟ ಕೂಡ.

 

 

 

 

 

 

 

 

Leave a Reply

Your email address will not be published. Required fields are marked *