Share this news

 

 

 

ಬೆಂಗಳೂರು: ಅನಾರೋಗ್ಯಕ್ಕೆ ಒಳಗಾಗಿದ್ದ ಇಸ್ರೋ ಮಾಜಿ ಅಧ್ಯಕ್ಷ, ಪದ್ಮಶ್ರೀ ಕೆ.ಕಸ್ತೂರಿರಂಗನ್ (84) ವಿಧಿವಶರಾಗಿದ್ದಾರೆ.ಕೆ.ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು 1994ರಿಂದ 2003ರವರೆಗೆ ಇಸ್ರೋ ಅಧ್ಯಕ್ಷರಾಗಿದ್ದರು. ಕೆ. ಕೃಷ್ಣಸ್ವಾಮಿ ಅವರು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ್ದರು.

ಡಾ. ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು 1940 ಅಕ್ಟೋಬರ್ 24 ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದರು. ಡಾ. ಕಸ್ತೂರಿರಂಗನ್ ಅವರು ಬಾಂಬೆ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದರು. 1971 ರಲ್ಲಿ ಅಹಮದಾಬಾದ್‌ನಲ್ಲಿ ಖಗೋಳಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದಿದ್ದರು.

ಭಾರತದ ಮೊದಲ ಎರಡು ಪ್ರಾಯೋಗಿಕ ಭೂ ವೀಕ್ಷಣಾ ಉಪಗ್ರಹಗಳಾದ ಭಾಸ್ಕರ-I ಮತ್ತು II ರ ಯೋಜನಾ ನಿರ್ದೇಶಕರಾಗಿದ್ದರು. ಭಾರತೀಯ ರಿಮೋಟ್ ಸೆನ್ಸಿಂಗ್ ಉಪಗ್ರಹ IಖS-1ಂ ಯ ನೇತೃತ್ವ ವಹಿಸಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಸಭೆಯ ಸದಸ್ಯರಾಗಿ ಮತ್ತು ಯೋಜನಾ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಕರಡು ಸಮಿತಿಯ ಅಧ್ಯಕ್ಷತೆ ವಹಿಸಿದ್ದರು. ಹೊಸ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ಹೊಂದಿರುವ 12 ಸದಸ್ಯರ ಸ್ಟೀರಿಂಗ್ ಸಮಿತಿಯ ನೇತೃತ್ವ ವಹಿಸಿದ್ದರು. ಇವರ ನೇತೃತ್ವದ ಪಶ್ಚಿಮ ಘಟ್ಟಗಳ ಕಸ್ತೂರಿರಂಗನ್ ಸಮಿತಿ ಪಶ್ಚಿಮ ಘಟ್ಟಗಳ ನೈಸರ್ಗಿಕ ಭೂದೃಶ್ಯದ 59,940 ಚ.ಕಿ.ಮೀ ಪ್ರದೇಶವನ್ನು 2013 ರಲ್ಲಿ ಪರಿಸರ ಸೂಕ್ಷ್ಮ ಎಂದು ಗುರುತಿಸಿತ್ತು.

ಕೆ. ಕಸ್ತೂರಿರಂಗನ್ ಅವರು ವಿಶ್ವಸಂಸ್ಥೆಯ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಶಿಕ್ಷಣ ಕೇಂದ್ರದ ಆಡಳಿತ ಮಂಡಳಿ, ಐಐಟಿ ಚೆನ್ನೈನ ಆಡಳಿತ ಮಂಡಳಿ, ರಾಮನ್ ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿ ಮತ್ತು ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯದ ಸಂಶೋಧನಾ ಮಂಡಳಿಯ ಅಧ್ಯಕ್ಷರಾಗಿದ್ದರು. ವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಖಗೋಳಶಾಸ್ತ್ರ, ಬಾಹ್ಯಾಕಾಶ ವಿಜ್ಞಾನ, ಬಾಹ್ಯಾಕಾಶ ಅನ್ವಯಿಕೆಗಳ ಕ್ಷೇತ್ರಕ್ಕೆ ಸಂಬAಧಿಸಿದ 200 ಕ್ಕೂ ಹೆಚ್ಚು ಪ್ರಬಂಧಗಳು ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ. ಮತ್ತು 6 ಪುಸ್ತಕಗಳನ್ನು ಬರೆದಿದ್ದಾರೆ. ಕೆ. ಕಸ್ತೂರಿರಂಗನ್ ಅವರಿಗೆ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಸಂದಿವೆ.

 

 

 

 

 

 

 

 

 

Leave a Reply

Your email address will not be published. Required fields are marked *