Share this news

 

 

 

ಕಾರ್ಕಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದುರ್ಗಾ ಮಲೆಬೆಟ್ಟುವಿನ ಕರುಣಾಕರ(34ವರ್ಷ) ಆತ್ಮಹತ್ಯೆ ಮಾಡಿಕೊಂಡವರು.

ಕರುಣಾಕರ ಅವರು ಕೂಲಿಕೆಲಸ ಮಾಡಿಕೊಂಡಿದ್ದವರು ಕಳೆದ 4 ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಬಗ್ಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತಗ್ಸೆ ಪಡೆಯುತ್ತಿದ್ದರೂ ಇತ್ತೀಚೆಗೆ ಹೆಚ್ಚಿನ ಖಿನ್ನತೆಗೆ ಒಳಗಾಗಿದ್ದರು. ಏ.28 ರಂದು ಕಾರ್ಕಳಕ್ಕೆ ಕೆಲಸಕ್ಕೆ ಹೋಗಿದ್ದವರು ಮಧ್ಯಾಹ್ನ ಮನೆಗೆ ಬಂದು ವಿಷ ಸೇವಿಸಿ ವಾಂತಿ ಮಾಡಿಕೊಂಡು ಮಲಗಿದ್ದರು. ಅವರನ್ನು ಸೋದರಮಾವ ಕಾರ್ಕಳ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದಾಗ ಆ ವೇಳೆಗಾಗಲೇ ಮೃತಪಟ್ಟಿದ್ದರು.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

 

 

 

Leave a Reply

Your email address will not be published. Required fields are marked *