ಕಾರ್ಕಳ: ಮತಾಂಧ ಶಕ್ತಿಗಳಿಂದ ಭೀಕರವಾಗಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಮನೆಗೆ ಕಾರ್ಕಳ ಬಂಟರ ಸಂಘದ ಸಂಚಾಲಕರಾದ ವಿಜಯ ಶೆಟ್ಟಿ ಮೇ.5 ರಂದು ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿ ಹೆತ್ತವರಿಗೆ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ವಿಜಯ ಶೆಟ್ಟಿಯವರು ತಮ್ಮ ವೈಯುಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ಧನ ಸಹಾಯ ನೀಡಿ, ಕುಟುಂಬಕ್ಕೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಬಂಟರ ಸಂಘದ ಪ್ರಮುಖರಾದ ಸೂರ್ಯಕಾಂತ್ ಶೆಟ್ಟಿ, ಹಿತೇಶ್ ಶೆಟ್ಟಿ, ವಿಖ್ಯಾತ್ ಶೆಟ್ಟಿ, ಸುಹಾಸ್ ಶೆಟ್ಟಿ, ದೇವೇಂದ್ರ ಶೆಟ್ಟಿ, ರಾಕೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.