ಬೆಂಗಳೂರು: ಪಾಕಿಸ್ತಾನದ ಉಗ್ರ ನೆಲೆಗಳನ್ನು ಭಾರತ ಉಡೀಸ್ ಮಾಡಿದೆ. ಆಪರೇಷನ್ ಸಿಂಧೂರ್ ನಿಂದ ಪಾಕ್ ನಿದ್ರೆಗೆಟ್ಟಿದೆ. ಪಹಲ್ಗಾಮ್‌ನಲ್ಲಿ ಹುತಾತ್ಮರಾದ ಭಾರತೀಯರ ಸಾವಿಗೆ ನೋವಿಗೆ ನ್ಯಾಯ ಸಿಕ್ಕಿದೆ. ಇಂಥಹ ಸಂದರ್ಭದಲ್ಲಿ ಬಹಳಷ್ಟು ಜನರು ಸೇನೆಯ ಕಡೆಗೆ ತಮ್ಮ ಗೌರವ, ದೇಶದೊಂದಿಗಿನ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿ ಪ್ರತಿಕ್ರಿಯಿಸುತ್ತಿದ್ದಾರೆ.
ಪಾಕಿಸ್ತಾನದ ಹಾಗೂ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ನಮ್ಮ ಯೋಧರು ಭಯೋತ್ಪಾದಕರ ನೆಲೆಗಳನ್ನು ನಾಶ ಮಾಡಿ ಪರಾಕ್ರಮ ಮೆರೆದಿದ್ದಾರೆ. ದೇಶದ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.