
ಬೆಳ್ತಂಗಡಿ : ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ.
ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ.
ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




