Share this news

ಕಾರ್ಕಳ:ನಮ್ಮ ಬದುಕು ಪರಿಪೂರ್ಣವಾಗಬೇಕಾದರೆ ಶಿಕ್ಷಣ ಅತ್ಯಗತ್ಯ. ಮಾನವೀಯ ಮೌಲ್ಯಗಳನ್ನು ಜತೆಗೆ ನಮ್ಮ ಬದುಕನ್ನು ರೂಪಿಸುವ ನಿಟ್ಟಿನಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು ‌

ಅವರು ಮೇ 11ರಂದು ಭಾನುವಾರ ಕಾರ್ಕಳದ ಕುಕ್ಕುಂದೂರು ಕೆಎಂಇಎಸ್ ಶಿಕ್ಷಣ ಸಂಸ್ಥೆಗಳ ನವೀಕೃತ ಶಾಲಾ ಕೊಠಡಿ,ಸುಸಜ್ಜಿತ ಆಡಿಟೋರಿಯಂ ಹಾಗೂ ಕಂಪ್ಯೂಟರ್ ಲ್ಯಾಬ್ ಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಕೆಎಂಇಎಸ್ ಶಿಕ್ಷಣ ಸಂಸ್ಥೆಯನ್ನು ಈ ಮಟ್ಟಕ್ಕೆ ಬೆಳೆಸುವ ನಿಟ್ಟಿನಲ್ಲಿ ನಿಸಾರ್ ಅಹಮದ್ ಅವರ ಕೊಡುಗೆ ಅಪಾರ. ಗ್ರಾಮೀಣ ಶಿಕ್ಷಣ ಸಂಸ್ಥೆಯಲ್ಲಿ ಒದಿ ಐಎಎಸ್ ಪರೀಕ್ಷೆ ಪಾಸ್ ಮಾಡಿರುವ ಶೌಖತ್ ಅಝಿಮ್ ಈ ಶಾಲೆಯ ವಿದ್ಯಾರ್ಥಿ ಎನ್ನುವುದು ಹೆಮ್ಮೆಯ ವಿಚಾರ ಎಂದರು.
ಕೇಮಾರು ಸಾಂದೀಪನಿ ಸಾಧನಾಶ್ರಮದ ಸ್ವಾಮೀಜಿಗಳಾದ ಶ್ರೀ ಈಶವಿಠಲದಾಸ ಸ್ವಾಮೀಜಿಯವರು ಆಶೀರ್ವಚನ ನೀಡಿ,
ಶಿಕ್ಷಣ ನಮ್ಮನ್ನು ಒಗ್ಗೂಡಿಸುವ ಜತೆಗೆ ಸಾಮರಸ್ಯದ ಜೀವನ ಹಾಗೂ ಮಾನವೀಯ ಮೌಲ್ಯಗಳನ್ನು ಕಲಿಸುತ್ತದೆ. ಮಕ್ಕಳಿಗೆ ಶಿಕ್ಷಣದ ಜತೆಗೆ ಆತ್ಮ ಶಕ್ತಿಯನ್ನು ತುಂಬಿಸುವ ಕೆಲಸವಾಗಬೇಕಿದೆ. ಸರ್ಟಿಫಿಕೇಟ್ ನಲ್ಲಿ ಸಾಧನೆ ಮಾಡಿದರೆ ಸಾಲದು ಜೀವನದಲ್ಲಿ ಸಾಧನೆ ಮಾಡಬೇಕು. ಮಕ್ಕಳಿಗೆ ಬದುಕುವ ಶಿಕ್ಷಣ ಕಲಿಸುವ ಕೆಲಸವಾಗಬೇಕು ಎಂದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ, ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಕೆ.ಎಸ್ ಮೊಹಮ್ಮದ್ ಮಸೂದ್,ಕಾರ್ಕಳ ಡಾ.ಟಿಎಂಎ ಮುನಿಯಾಲು ಉದಯ ಶೆಟ್ಟಿ,ಅತ್ತೂರು ಮಸೀದಿಯ ಧರ್ಮಗುರು ಮೌಲಾನಾ ಅಬ್ದುಲ್ ಹಫೀಜ್,ರೆ.ಫಾ ವಲ್ಲೇಶ್ ಪ್ರಜ್ವಲ್ ಅರಾನ್ಹಾ, ಶಿಕ್ಷಣ ಸಂಯೋಜಕ ಬಾಲಕೃಷ್ಣ ನಾಯಕ್,ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕೆ, ಶೌಖತ್ ಅಜೀಜ್, ಸಲೀಮುಲ್ಲಾ ಖಾನ್, ಫಾಝಿಲ್ ರೆಹಮಾನ್,ಮಿಸ್ ಕರ್ನಾಟಕ ಅಪೇಕ್ಷಾ ಬಿ.ಹೆಗ್ಡೆ, ಕೆಎಂಇಎಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲೆ ಶ್ರೀಮತಿ ಪಾಟ್ಕರ್ ಉಪಸ್ಥಿತರಿದ್ದರು.
KMES ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಎಸ್ ಇಮ್ತಿಯಾಜ್ ಅಹಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಲೊಲಿಟಾ ಝೀನಾ ಡಿಸಿಲ್ವ ಸ್ವಾಗತಿಸಿ, ಶಿಕ್ಷಕಿ ನಳಿನಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

 

 

 

 

 

 

 

 

 

 

Leave a Reply

Your email address will not be published. Required fields are marked *