

ಕಾರ್ಕಳ: ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಕಳ ಹಾಗೂ ನ್ಯಾಯವಾದಿಗಳ ಸಂಘದ ಜಂಟೀ ಸಹಯೋಗದಲ್ಲಿ, ಅರಣ್ಯ ಇಲಾಖೆಯ ಸಹಕಾರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಗಳವಾರ ತಾಲೂಕು ಕ್ರೀಡಾಂಗಣದ ವಠಾರದಲ್ಲಿ ಸಸಿ ನೆಡುವ ಮೂಲಕ ಆಚರಿಸಲಾಯಿತು.
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎ. ಸಮಿವುಲ್ಲಾ ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಿಡ ನೆಟ್ಟು ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.
ವಿಶೇಷ ಅತಿಥಿಯಾಗಿ ಹೆಚ್ಚುವರಿ ನಾಗರಿಕ ನ್ಯಾಯಾಧೀಶೆ ಗೀತಾ ಡಿ. ಅವರು ಉಪಸ್ಥಿತರಿದ್ದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸ್ವಚ್ಛ ಕರ್ಕಳ ಬ್ರಿಗೇಡ್ ಸದಸ್ಯ ಹಾಗೂ ನ್ಯಾಯವಾದಿ ಎಂ.ಕೆ. ವಿಫುಲ್’ತೇಜ್ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪರಿಸರ ಸಂರಕ್ಷಣೆ ಬಗ್ಗೆ ನಮಗೆ ಇರುವ ಮೂಲಭೂತ ಕರ್ತವ್ಯಗಳ ಬಗ್ಗೆ ಮಾಹಿತಿ ಹಂಚಿಕೊಂಡರು.








